Advertisement

ಕರಾಟೆಯಿಂದ ಆತ್ಮಬಲ; ಸಂಗಮೇಶ ದುಂದೂರ

06:10 PM Feb 09, 2022 | Team Udayavani |

ಗದಗ: ವಿದ್ಯಾರ್ಥಿನಿಯರಿಗೆ ಆತ್ಮವಿಶ್ವಾಸ ಮೂಡಿಸಲು ಹಾಗೂ ಸ್ವಯಂ ರಕ್ಷಣೆಗಾಗಿ ಆತ್ಮರಕ್ಷಣಾ ಕಲೆ ಕರಾಟೆ ತರಬೇತಿ ನೀಡುವುದು ಓಬವ್ವ ಆತ್ಮ ರಕ್ಷಣಾ ಕಲೆಯ ಕೌಶಲ್ಯಗಳ ತರಬೇತಿ ಕಾರ್ಯಕ್ರಮದ ಉದ್ದೇಶ ಎಂದು ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂಗಮೇಶ ದುಂದೂರ ತಿಳಿಸಿದರು.

Advertisement

ಜಿಲ್ಲಾಡಳಿತ, ಜಿಪಂ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘಗಳ ಆಶ್ರಯದಲ್ಲಿ ಮಂಗಳವಾರ ನಗರದ ಕಳಸಾಪುರ ರಸ್ತೆಯಲ್ಲಿರುವ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ ಓಬವ್ವ ಆತ್ಮ ರಕ್ಷಣಾ ಕಲೆಯ ಕೌಶಲ್ಯಗಳ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಈ ತರಬೇತಿ ವಿದ್ಯಾರ್ಥಿನಿಯರ ಆತ್ಮವಿಶ್ವಾಸವನ್ನು ಉನ್ನತ ಮಟ್ಟಕ್ಕೆ ಒಯ್ಯುತ್ತದೆ. ಸಮಾಜದಲ್ಲಿ ಮಹಿಳೆಯರು ಪುರುಷರಿಗೆ ಸಮಾನವಾಗಿ ಯಾವುದರಲ್ಲೂ ಕಡಿಮೆಯಿಲ್ಲವೆಂದು ತೋರಿಸಿದ್ದಾರೆ. ದೈಹಿಕ ಸಾಮರ್ಥ್ಯವಲ್ಲದೇ ಮಾನಸಿಕ ಸ್ಥೈರ್ಯ ಹೆಚ್ಚಿಸಲು ಅವಕಾಶ ಕಲ್ಪಿಸುವ ಕಲೆಯಾಗಿದೆ ಎಂದರು.

ನಗರಸಭೆ ಅಧ್ಯಕ್ಷ ಉಷಾ ದಾಸರ ಮಾತನಾಡಿ, ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣೆ ಹಾಗೂ ಆತ್ಮವಿಶ್ವಾಸ ಮೂಡಿಸುವ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಇದಾಗಿದೆ ಎಂದರು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ ಮಾತನಾಡಿ, ಜಿಲ್ಲಾ ಮಟ್ಟದಲ್ಲೂ ಓಬವ್ವ ಆತ್ಮ ರಕ್ಷಣಾ ಕೌಶಲ್ಯಗಳ ತರಬೇತಿ ಹಮ್ಮಿಕೊಳ್ಳಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಸಮಾಜ ಕಲ್ಯಾಣ ಇಲಾಖೆ ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಹೆಣ್ಣು ಮಕ್ಕಳಿಗೆ ಆತ್ಮವಿಶ್ವಾಸ ಮೂಡಿಸಲು ಹಾಗೂ ಆತ್ಮರಕ್ಷಣೆ ಉದ್ದೇಶದಿಂದ ಈ ಯೋಜನೆ ಜಾರಿ ಮಾಡಲಾಗಿದೆ. ವೀರ ವನಿತೆ ಓಬ್ಬವ್ವ ಯಾವುದೇ ಆಯುಧವಿಲ್ಲದೇ ಶತ್ರುಗಳನ್ನು ಸೋಲಿಸಿ, ಕೋಟೆ ರಕ್ಷಣೆ ಮಾಡಿದ್ದು ಎಲ್ಲ ಹೆಣ್ಣು ಮಕ್ಕಳಿಗೆ ಆದರ್ಶವಾಗಿದೆ ಎಂದರು.

Advertisement

ಇದೇ ಸಂದರ್ಭದಲ್ಲಿ ಗೊಜನೂರು ಹಾಗೂ ಒಡೆಯರ ಮಲ್ಲಾಪುರ ಮೊರಾರ್ಜಿ ವಸತಿ ನಿಲಯದ ವಿದ್ಯಾರ್ಥಿಗಳಿಂದ ತರಬೇತಿಯ ಕುರಿತು ಪ್ರಾತ್ಯಕ್ಷಿಕೆ ಜರುಗಿತು. ಮಂಜು ಭಜಂತ್ರಿ, ರಾಜೇಶ್ವರಿ ಭಜಂತ್ರಿ ಅವರು ಲಾಠಿ ಚಲಾಯಿಸುವ ಕುರಿತು ಪ್ರದರ್ಶನ ನೀಡಿದರು. ಜಿಲ್ಲಾಧಿಕಾರಿ ಎಂ.ಸುಂದರೇಶ್‌ ಬಾಬು, ಜಿಪಂ ಸಿಇಒ ಭರತ್‌ ಎಸ್‌., ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅ ಧಿಕಾರಿ ಮೆಹಬೂಬ ತುಂಬರಗಟ್ಟಿ ವೇದಿಕೆಯ ಮೇಲೆ ಉಪಸ್ಥಿತರಿದ್ದರು. ಕಾವ್ಯಾ ಸೊರಟೂರ
ಹಾಗೂ ಸಂಗಡಿಗರು ಪ್ರಾರ್ಥಿಸಿ, ವೆಂಕಟೇಶ್‌ ಅಲ್ಕೋಡ್‌ ನಾಡಗೀತೆ ಹಾಡಿದರು. ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾ ಧಿಕಾರಿ ರವಿ ಗುಂಜೀಕರ್‌ ಸ್ವಾಗತಿಸಿ, ಬಸವರಾಜ ಬಳ್ಳಾರಿ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next