ಬೆಳ್ತಂಗಡಿ: ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಮಿತಿ ಕುಕ್ಕೇಡಿ -ನಿಟ್ಟಡೆ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಇವುಗಳ ಆಶ್ರಯದಲ್ಲಿ ಕುಕ್ಕೇಡಿ-ನಿಟ್ಟಡೆ ಗ್ರಾಮಗಳ ಬಿಲ್ಲವ ಸಮುದಾಯದ ಸ್ವ- ಸಹಾಯ ಸಂಘಗಳ ಉದ್ಘಾಟನೆ ಹಾಗೂ ಯುವ ಬಿಲ್ಲವ ವೇದಿಕೆಯ ಅಧ್ಯಕ್ಷರಾಗಿದ್ದು ಇದೀಗ ವೇಣೂರು ಲಯನ್ಸ್ ಕ್ಲಬ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ನಿತೀಶ್ ಎಚ್. ಅವರಿಗೆ ಅಭಿನಂದನಾ ಕಾರ್ಯಕ್ರಮ ಕುಕ್ಕೇಡಿಯ ಡಾ| ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆಯಿತು.
ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಭಗೀರಥ ಜಿ. ಅವರು ಸ್ವ ಸಹಾಯ ಸಂಘಗಳನ್ನು ಉದ್ಘಾಟಿಸಿದರು. ಕುಂಡದಬೆಟ್ಟು ಬ್ರಹ್ಮಶ್ರೀ ಗುರುನಾರಾಯಣಸ್ವಾಮಿ ಸೇವಾ ಸಂಘದ ಅಧ್ಯಕ್ಷ ಕೆ. ಸುಂದರ ಪೂಜಾರಿ ಅಮೈ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಮೂಡಬಿದಿರೆ ಲಯನ್ಸ್ ಕ್ಲಬ್‌ನ ಅಧ್ಯಕ್ಷ ರುಕ್ಮಯ ಪೂಜಾರಿ, ಯುವ ಬಿಲ್ಲವ ವೇದಿಕೆ ಕುಂಡದಬೆಟ್ಟು ಅಧ್ಯಕ್ಷ ನಿತೀಶ್ ಎಚ್., ಲಯನ್ಸ್ ಜಿಲ್ಲಾ ಸಂಯೋಜಕ ಜಗದೀಶ್ಚಂದ್ರ ಡಿ.ಕೆ., ಜೇಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ಸಂತೋಷ್ ಪಿ. ಕೋಟ್ಯಾನ್ ಬಳಂಜ, ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವತ್ಥ್ ಕುಮಾರ್, ಕುಕ್ಕೇಡಿ ಗ್ರಾ.ಪಂ. ಅಧ್ಯಕ್ಷೆ ತೇಜಾಕ್ಷಿ, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಲೀಲಾವತಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವೇಣೂರು ಕೃಷಿ ಅಧಿಕಾರಿ ದಯಾನಂದ, ವೇಣೂರು ಬಿಲ್ಲವ ಸಂಘದ ಅಧ್ಯಕ್ಷ ಪೂವಪ್ಪ ಪೂಜಾರಿ, ಕುಕ್ಕೇಡಿ ಗ್ರಾ.ಪಂ. ಮಾಜಿ ಅಧ್ಯಕ್ಷೆ ಗುಣವತಿ, ವೇಣೂರು ಸಿ.ಎ. ಬ್ಯಾಂಕ್‌ನ ಮಾಜಿ ನಿರ್ದೇಶಕ ರಮೇಶ್, ಬೆಳವಾಯಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಶಾಖೆಯ ವ್ಯವಸ್ಥಾಪಕಿ ನಿಶ್ಮಿತಾ ರಾಜೇಶ್, ಶಿರ್ತಾಡಿ ಶಾಖೆಯ ವ್ಯವಸ್ಥಾಪಕ ಶಿವಪ್ರಸಾದ್, ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷ ನವೀನ್ ಪಚ್ಚೇರಿ, ಗರ್ಡಾಡಿ ಬಿಲ್ಲವ ಸಂಘದ ಅಧ್ಯಕ್ಷ ಹರೀಶ್ ಕೋಟ್ಯಾನ್, ಊರವರು, ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ವೇಣೂರು ಲಯನ್ಸ್ ಕ್ಲಬ್‌ನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ನಿತೀಶ್ ಎಚ್., ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯೆಯಾಗಿ ಆಯ್ಕೆಯಾಗಿರುವ ವಿಮಲ ಚಂದ್ರ ಕೋಟ್ಯಾನ್ ಅವರನ್ನು ಸಮ್ಮಾನಿಸಲಾಯಿತು. ಗಾರೆ ಕೆಲಸ ಮಾಡುವಾಗ ಆಕಸ್ಮಿಕವಾಗಿ ಬಿದ್ದು ಗಾಯಗೊಂಡಿರುವ, ಯಶೋಧರ ಪೂಜಾರಿ ಮುಡಾಯಿಬೆಟ್ಟು ಬರ್ಕಜೆ ಅವರ ವೈದ್ಯಕೀಯ ಚಿಕಿತ್ಸೆಗೆ ಆರ್ಥಿಕ ನೆರವು ನೀಡಲಾಯಿತು. ಕುಂಡದಬೆಟ್ಟು ಯುವ ಬಿಲ್ಲವ ವೇದಿಕೆಯ ಉಪಾಧ್ಯಕ್ಷ ಭರತ್‌ರಾಜ್ ಕೆ. ಸ್ವಾಗತಿಸಿ, ಮಹಿಳಾ ಬಿಲ್ಲವ ವೇದಿಕೆಯ ಅಶ್ವಿನಿ ಕಾರ್ಯಕ್ರಮ ನಿರೂಪಿಸಿ, ರಾಜೇಂದ್ರ ಕೆ. ವಂದಿಸಿದರು.