Advertisement

ಶಾಲೆ ದುರವಸ್ಥೆ ಬಗ್ಗೆ ಲೋಕಾದಲ್ಲಿ ಸ್ವಯಂ ಪ್ರೇರಿತ ದೂರು ದಾಖಲು

11:25 AM Jun 26, 2017 | Team Udayavani |

ಬೆಂಗಳೂರು: ಮಾಗಡಿ ರಸ್ತೆಯ ಮಾಚೋಹಳ್ಳಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಕುಸಿದು ಬೀಳುವ ಹಂತದಲ್ಲಿದ್ದರೂ ಸೂಕ್ತ ಕ್ರಮಕ್ಕೆ ಮುಂದಾಗದ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ನಗರ ಜಿಲ್ಲಾ ಪಂಚಾಯ್ತಿ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ನ್ಯಾ.ಪಿ.ವಿಶ್ವನಾಥ ಶೆಟ್ಟಿ  ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisement

ಶಾಲೆಯ ದುರವಸ್ಥೆ ಕುರಿತು ಲೋಕಾಯುಕ್ತರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಉತ್ತಮ ಶಿಕ್ಷಣದ ಕನಸು ಕಟ್ಟಿಕೊಂಡು ಶಾಲೆಗೆ ದಾಖಲಾಗಿರುವ ಮಕ್ಕಳು ಕುಸಿದು ಬೀಳುವ ಹಂತದಲ್ಲಿರುವ ಕಟ್ಟಡದ ಕೊಠಡಿಗಳಲ್ಲಿ ಪಾಠ ಕೇಳುವ ದುಸ್ಥಿತಿಯಿರುವುದು ಬೇಸರದ ಸಂಗತಿ.

ಇದರಿಂದ 110 ಮಕ್ಕಳ ಜೀವಕ್ಕೆ ಅಪಾಯವಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.  ಈ ನಿಟ್ಟಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು, ಆಡಳಿತವಿಭಾಗ, ಬೆಂಗಳೂರು ಜಿಲ್ಲಾ ಶಿಕ್ಷಣ ಆಯುಕ್ತರು, ಉತ್ತರ ಭಾಗದ ಕ್ಷೇತ್ರ ಶಿಕ್ಷಣಾಧಿಕಾರಿ, ಶಾಲೆಯ ಮುಖ್ಯೋಪಾಧ್ಯಯರು ಹಾಗೂ

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗೆ  ನೋಟೀಸ್‌ ಜಾರಿಗೊಳಿಸಿರುವ ಲೋಕಾಯುಕ್ತರು, ಶಿಥಿಲಾವಸ್ಥೆಯಲ್ಲಿರುವ ಶಾಲಾ ಕೊಠಡಿಗಳ ದುರಸ್ಥಿಗೆ ಮುಂದಾಗಿ ಮುಂದಿನ 10 ದಿನಗಳಲ್ಲಿ ವರದಿ ನೀಡುವಂತೆ  ಆದೇಶಿಸಿದ್ದಾರೆ. ಜತೆಗೆ ಸ್ವಯಂಪ್ರೇರಿತ ದೂರಿನ ವಿಚಾರಣೆಯನ್ನು ಜುಲೈ 4ರಂದು ನಡೆಸುವುದಾಗಿಯೂ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next