Advertisement
ಸುಶೀಲಮ್ಮ ಬಂಕಾಪುರದ ಚನ್ನಬಸಪ್ಪ ಪ್ರಥಮ ದರ್ಜೆ ಮಹಿಳಾ ಕಾಲೇಜು, ಅಥಣಿ ಸ್ನಾತಕೋತ್ತರ ಕೇಂದ್ರ, ಭಾರತೀಯ ಜೈನ್ ಸಂಘಟನೆ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಏರ್ಪಡಿಸಿದ್ದ ಮಹಿಳಾ ಸಬಲೀಕರಣ… ವಿಷಯ ಕುರಿತ ಎರಡು ದಿನಗಳ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿನಿಯರು ಒಳಗೊಂಡಂತೆ ಮಹಿಳೆಯರು ಆತ್ಮವಿಶ್ವಾಸ, ದೃಢ ನಿರ್ಧಾರದೊಂದಿಗೆ ಮುನ್ನಡೆಯುವ ಮೂಲಕ ಸಬಲತೆಯ ಹಾದಿಯಲ್ಲಿ ಸಾಗಬೇಕು ಎಂದರು.
ಮುಂದಿನ ಜೀವನದಲ್ಲಿ ಅಗತ್ಯವಿದ್ದಾಗ ಸ್ವತಂತ್ರವಾಗಿ ನಿರ್ಧಾರ ಕೈಗೊಳ್ಳಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಮನೆಯಲ್ಲಿ ತಂದೆ-ತಾಯಿ ಹಾಗೂ ಶಾಲಾ-ಕಾಲೇಜುಗಳಲ್ಲಿ ಗುರುಗಳಿಂದ ವಿಷಯದ ಬಗ್ಗೆ ಸಮಗ್ರವಾಗಿ ಅರಿತುಕೊಳ್ಳಬೇಕು. ಮಹಿಳೆಯರು ಹಿಂಜರಿಕೆ ಮನೋಭಾವನೆ ಕೈ ಬಿಡಬೇಕು. ಯಾವುದಕ್ಕೂ ಹಿಂದೇಟು ಹಾಕಬಾರದು ಎಂದು ಸಲಹೆ ನೀಡಿದರು. ಭಾರತೀಯ ಜೈನ್ ಸಂಘಟನೆಯ ರಾಜ್ಯ ಘಟಕದ ಅಶೋಕ್ ಜೈನ್ ಮಾತನಾಡಿ, ಮಹಿಳೆಯರು ಪ್ರತಿನಿತ್ಯ ಸಾಕಷ್ಟು ಸಮಸ್ಯೆಗಳ ಎದುರಿಸುತ್ತಾರೆ. ಅವುಗಳ ಮೇಲೆ ಬೆಳಕು ಚೆಲ್ಲುವುದರ ಜೊತೆಗೆ ಸೂಕ್ತ ಪರಿಹಾರ ಕಂಡುಕೊಳ್ಳುಲು ಸಂಸ್ಥೆ ವತಿಯಿಂದ ಕಾರ್ಯಾಗಾರ ಆಯೋಜಿಸಲಾಗುತ್ತಿದೆ. ಶಾಲಾ-ಕಾಲೇಜುಗಳಲ್ಲಿ ಮಹಿಳಾ ಸಬಲೀಕರಣ…ವಿಷಯ ಕುರಿತ ವಿಚಾರ ಸಂಕಿರಣ, ಕಾರ್ಯಾಗಾರ ನಡೆಸುವ ಮೂಲಕ ವಿದ್ಯಾರ್ಥಿನಿಯರಲ್ಲಿ ಸ್ವಾವಲಂಬನೆಯ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.
Related Articles
Advertisement