Advertisement

2 ವಿಚಾರಗಳಲ್ಲಿ ಸ್ವಯಂ ನಿರ್ಬಂಧ ಹಾಕಿಕೊಂಡಿದ್ದೇನೆ:BSY ಹೇಳಿದ್ದೇನು?

10:35 AM May 02, 2017 | Team Udayavani |

 ಕಲಬುರಗಿ: ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ ಮತ್ತು ಈಶ್ವರಪ್ಪ ಈ ಎರಡು ವಿಚಾರಗಳ ಕುರಿತು ಯಾವುದೇ ಪ್ರತಿಕ್ರಿಯೆ ನೀಡದಿರಲು ನಾನು ಸ್ವಯಂ ನಿರ್ಬಂಧ ಹೇರಿಕೊಂಡಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಮಂಗಳವಾರ ಹೇಳಿಕೆ ನೀಡಿದ್ದಾರೆ. 

Advertisement

ಸುದ್ದಿಗಾರರು ಪ್ರಶ್ನಿಸಿದಾಗ ಈ ಉತ್ತರ ನೀಡಿದ ಅವರು ನಾನು ವರಿಷ್ಠರಿಗೆ ಎಲ್ಲಾ ವಿಚಾರಗಳನ್ನು ಮನವರಿಕೆ ಮಾಡಿದ್ದೇನೆ. 2018 ರ ಚುನಾವಣೆ ಮತ್ತು ಮಿಷನ್‌ 150 ಬಗ್ಗೆ ಗಮನ ಹರಿಸುತ್ತೇನೆ. ಪಕ್ಷವನ್ನು ಸಂಘಟಿಸಲು ರಾಜ್ಯಾಧ್ಯಂತ ಪ್ರವಾಸ ಮಾಡುತ್ತಿದ್ದೇನೆ ಎಂದರು. 

ಮೇ 5ಮತ್ತು 6 ರಂದು ಮೈಸೂರಿನಲ್ಲಿ ರಾಜ್ಯ ಕಾರ್ಯಕಾರಿಣಿ ನಡೆಯಲಿದ್ದು, ಕೇಂದ್ರ ಸಚಿವರಾದಿ ಎಲ್ಲಾ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. 

Advertisement

Udayavani is now on Telegram. Click here to join our channel and stay updated with the latest news.

Next