Advertisement
ಮುಟೇನ್ ಪೂರ್ವ ನಕ್ಷೆ ಯೋಜನೆಯು ಕರ್ನಾಟಕ ರಾಜ್ಯಾದ್ಯಂತ ಪ್ರಾರಂಭವಾದಾಗಿನಿಂದ ಜನಸಾಮಾನ್ಯರಿಗೆ ತಮ್ಮ ಜಮೀನುಗಳ ಪೈಕಿ ಖರೀದಿ, ವಾಟ್ನಿ, ದಾನ ಪತ್ರ ಇತ್ಯಾದಿ ಹಕ್ಕು ಬದಲಾವಣೆ ವ್ಯವಹಾರಗಳಲ್ಲಿ ವ್ಯಾಜ್ಯ ರಹಿತ ಸೇವೆ ಸಲ್ಲಿಸುವಲ್ಲಿ ಭೂಮಾಪನ ಇಲಾಖೆಯ ಪಾತ್ರ ಪ್ರಮುಖವಾಗಿದೆ. ಈ ಹಿನ್ನೆಲೆಯಲ್ಲಿ ತಂತ್ರಜ್ಞಾನ ಬಳಸಿ ಸಾಕಷ್ಟು ಮಾರ್ಪಾಡು ಮಾಡಿ ಸಾರ್ವಜನಿಕರ ಸೇವೆ ನೀಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಈ ತೊಂದರೆ ನೀಗಿಸುವ ನಿಟ್ಟಿನಲ್ಲಿ ಸ್ವಾವಲಂಬಿ ಅಪ್ಲಿಕೇಷನ್ ರೂಪಿಸಲಾಗಿದೆ.
Related Articles
Advertisement
ಈ ಮೊದಲು ನಾಡಕಚೇರಿಗೆ ಹೋಗಿ ಜಮೀನಿನ 11ಇ, ಪೋಡಿ ಕಾರ್ಯ ಸೇರಿ ಇತ್ಯಾದಿ ಕಾರ್ಯಗಳಿಗೆ ಅರ್ಜಿ ಸಲ್ಲಿಸಬೇಕಾಗಿತ್ತು. ಆ ಅರ್ಜಿಯು ನಾಡ ಕಛೇರಿಯಲ್ಲಿ ಪರಿಶೀಲನೆಗೊಳಪಟ್ಟು ಸರತಿಯಲ್ಲಿ ಬೀಳುತ್ತಿತ್ತು. ಸರತಿಯಿಂದ ಭೂಮಾಪಕರ ಬಳಿ ಹೋಗುತ್ತಿತ್ತು. ಭೂಮಾಪಕರು ಜಮೀನನ್ನು ಪರಿಸೀಲಿಸಿ ನಕ್ಷೆ ಗುರುತಿಸಿ ಅಪ್‌ಲೋಡ್ ಮಾಡುತ್ತಿದ್ದರು. ಅಪ್ ಲೋಡ್ ಆದ ದಾಖಲೆಯನ್ನು ತಪಾಸಕರ ಮೂಲಕ ಪರಿಶೀಲಿಸಿ ಬಳಿಕ ಅಂತಿಮ ಅನುಮೋದನೆಗೆ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಛೇರಿಗೆ ಕಳುಹಿಸಲಾಗುತ್ತಿತ್ತು. ಆದರೆ ಸ್ವಾವಲಂಬಿ ವೆಬ್ ಸೈಟ್ ಮೂಲಕ ಸಲ್ಲಿಕೆಯಾಗುವ ಅರ್ಜಿ ಅತೀ ಕಡಿಮೆ ಅವ ಯಲ್ಲಿ ವಿಲೇವಾರಿ ಮಾಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದ್ದಾರೆ. ಕಡ್ಡಾಯವಾಗಿ ಜಮೀನಿನ ಆರ್ ಟಿಸಿ ನಂಬರ್ ಇದ್ದರೆ ಮಾತ್ರ ಅರ್ಜಿ ಮಾನ್ಯವಾಗುತ್ತದೆ. ಈ ಹೊಸ ಯೋಜನೆಯ ಲಾಭವನ್ನು ಜಿಲ್ಲೆಯ ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಭೂದಾಖಲೆಗಳ ಉಪ ನಿರ್ದೇಶಕರು ತಿಳಿಸಿದ್ದಾರೆ.