Advertisement

ಪ್ರಮಾಣೀಕೃತ ಬೀಜ ಮಾರಾಟ ಮಾಡಿ

06:29 PM May 02, 2020 | Suhan S |

ಮುಂಡರಗಿ: ಮುಂಗಾರು ಬಿತ್ತನೆ ಪ್ರಾರಂಭವಾಗುತ್ತಿದ್ದು, ತಾಲೂಕಿನಲ್ಲಿ ಕೃಷಿ ಪರಿಕರ ಮಾರಾಟಗಾರರು ಕಡ್ಡಾಯವಾಗಿ ಪ್ರಮಾಣೀಕರಿಸಿದ ಬೀಜವನ್ನು ಮಾರಾಟ ಮಾಡಬೇಕು ಎಂದು ಸಹಾಯಕ ಕೃಷಿ ನಿರ್ದೇಶಕ ಪ್ರಮೋದ ತುಂಬಳ ಹೇಳಿದರು.

Advertisement

ಪಟ್ಟಣದ ಕೃಷಿ ಇಲಾಖೆಯ ಕಾರ್ಯಾಲಯದಲ್ಲಿ ನಡೆದ ಕೃಷಿ ಪರಿಕರ ಮಾರಾಟಗಾರರ ಸಭೆಯಲ್ಲಿ ಅವರು ಮಾತನಾಡಿದರು. ಕೃಷಿ ಪರಿಕರ ಮಾರಾಟಗಾರರು ಹೆಚ್ಚಿನ ಬೆಲೆಗಳಿಗೆ ಬೀಜ, ರಸಗೊಬ್ಬರ, ಕೀಟನಾಶಕ ಮಾರಾಟ ಮಾಡಬಾರದು. ಮಾರಾಟ ಮಳಿಗೆಯಲ್ಲಿ ಕಡ್ಡಾಯವಾಗಿ ದರಪಟ್ಟಿ ಹಾಕಬೇಕು. ರೈತರು ಬೀಜ ಖರೀದಿಸಿದಾಗ ಪರಿಕರ ಮಾರಾಟಗಾರರಿಂದ ಕಡ್ಡಾಯವಾಗಿ ರಶೀದಿ ಪಡೆದುಕೊಳ್ಳಬೇಕು.

ಅಕ್ರಮವಾಗಿ ಯಾವುದೇ ಅಧಿಕೃತ ಪರವಾನಗಿ ಇಲ್ಲದೇ ದೃಢೀಕೃತವಲ್ಲದ ಮೆಕ್ಕೆಜೋಳದ ಬೀಜಗಳನ್ನು ಮೋಸದಿಂದ ರೈತರಿಗೆ ಮಾರಾಟ ಮತ್ತು ದಾಸ್ತಾನು ಮಾಡುವವರ ವಿರುದ್ದ ಕಾನೂನು ಕ್ರಮ ಜರುಗಿಸುವ ಕುರಿತು ಕೃಷಿ ಪರಿಕರ ಮಾರಾಟಗಾರರಿಗೆ ಕ್ರಮ ಜರುಗಿಸಲಾಗುವುದು. ರೈತರು ಅನಧಿ ಕೃತ ಬೀಜಗಳ ಮಾರಾಟ ಕಂಡುಬಂದರೆ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರು ಇವರಿಗೆ ದೂರು ಸಲ್ಲಿಸಬೇಕು. ರೈತರು ಕೃಷಿ ಪರಿಕರಗಳನ್ನು ಖರೀದಿಸುವ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದರು.

ತಾಂತ್ರಿಕ ಅಧಿಕಾರಿ ರವಿಕುಮಾರ ಹಾವನೂರ, ಗೌರಿಶಂಕರ ಸಜ್ಜನರ, ತಾಲೂಕಿನ ಕೃಷಿ ಪರಿಕರ ಮಾರಾಟಗಾರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next