Advertisement

ಕದ್ದ ಮೊಬೈಲ್‌ ಮಾರಿ ಬೆಟ್ಟಿಂಗ್‌, ಮೋಜು

11:30 PM Aug 01, 2023 | Team Udayavani |

ಬೆಂಗಳೂರು: ಕ್ರಿಕೆಟ್‌ ಬೆಟ್ಟಿಂಗ್‌ ಹಾಗೂ ಮೋಜು-ಮಸ್ತಿಗಾಗಿ ಮೊಬೈಲ್‌ ಕಳವು ಮಾಡುತ್ತಿದ್ದ ಆರೋಪಿಯನ್ನು ಸಿದ್ದಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

Advertisement

ಸಿದ್ದಾಪುರ ನಿವಾಸಿ ಮುತ್ತು (19) ಬಂಧಿತ ಆರೋಪಿ. ಈತನಿಂದ 3.5 ಲಕ್ಷ ರೂ. ಮೌಲ್ಯದ 23 ಮೊಬೈಲ್‌ ವಶಕ್ಕೆ ಪಡೆಯಲಾಗಿದೆ. ಬಸ್‌ ನಿಲ್ದಾಣ, ಜನನಿಬಿಡ ಪ್ರದೇಶಗಳಲ್ಲಿ ಸಾರ್ವಜನಿಕರ ಮೊಬೈಲ್‌ ಕಳವು ಮಾಡುತ್ತಿದ್ದ.

ಅವುಗಳನ್ನು ಕಡಿಮೆ ಮೊತ್ತಕ್ಕೆ ಮಾರಾಟ ಮಾಡಿ, ಬಂದ ಹಣದಲ್ಲಿ ಕ್ರಿಕೆಟ್‌ ಬೆಟ್ಟಿಂಗ್‌, ಮೋಜು-ಮಸ್ತಿ, ಪಾರ್ಟಿ, ಯುವತಿಯರ ಜತೆ ಸುತ್ತಾಡಲು ಬಳಸುತ್ತಿದ್ದ. ಇತ್ತೀಚೆಗೆ ಠಾಣೆ ವ್ಯಾಪ್ತಿಯಲ್ಲಿ ಕೃತ್ಯ ಎಸಗಿದ್ದು, ಚಾಮರಾಜಪೇಟೆ, ಮೈಸೂರು ರಸ್ತೆ, ಕೆ.ಆರ್‌.ಮಾರ್ಕೆಟ್‌, ಕಲಾಸಿಪಾಳ್ಯ, ಕೆ.ಜಿ.ನಗರ ಠಾಣೆ ವ್ಯಾಪ್ತಿಯ ಪಾರ್ಕ್‌, ಮಾರುಕಟ್ಟೆ ,ಬಸ್‌ ನಿಲ್ದಾಣಗಳಲ್ಲಿ ಸಾರ್ವಜನಿಕರ ಮೊಬೈಲ್‌ ದೋಚಿರುವುದು ಪತ್ತೆಯಾಗಿದೆ ಎಂದು ಪೊಲೀಸರು ಹೇಳಿದರು. ಠಾಣಾಧಿಕಾರಿ ಹನುಮಂತ ಭಜಂತ್ರಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next