Advertisement
ಈತ ಬೆಂಗಳೂರಿನಿಂದ ಎಂಡಿಎಂಎ ಖರೀದಿಸಿಕೊಂಡು ಮಾರುತಿ 800 ಕಾರಿನಲ್ಲಿಟ್ಟು ಮಂಗಳೂರು ನಗರ ಹಾಗೂ ಕೇರಳ ರಾಜ್ಯದ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಆರೋಪಿ ಹಸನ್ ಸಾದಿಕ್ ವಿರುದ್ಧ ಈ ಹಿಂದೆ ವಿಟ್ಲ ಠಾಣೆಯಲ್ಲಿ ಒಟ್ಟು 8 ಹಲ್ಲೆ, ಬೆದರಿಕೆ ಪ್ರಕರಣಗಳು, 4 ಕೊಲೆ ಯತ್ನ ಪ್ರಕರಣ, ಪುತ್ತೂರು ನಗರ ಠಾಣೆಯಲ್ಲಿ 2 ಕೊಲೆ ಯತ್ನ ಪ್ರಕರಣ, ಉಪ್ಪಿನಂಗಡಿ ಠಾಣೆಯಲ್ಲಿ ಮಾನಭಂಗ ಹಾಗೂ ಕಿಡ್ನಾéಪ್ ಪ್ರಕರಣ, ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಹಲ್ಲೆ ಪ್ರಕರಣ, ಕಾವೂರು ಠಾಣೆಯಲ್ಲಿ ದರೋಡೆಗೆ ಯತ್ನ ಪ್ರಕರಣ, ಬೆಂಗಳೂರು ಹೆಬ್ಬಾಳ ಠಾಣೆಯಲ್ಲಿ ಮಾದಕ ವಸ್ತು ಮಾರಾಟ ಹೀಗೆ ಒಟ್ಟು 17 ಪ್ರಕರಣಗಳು ದಾಖಲಾಗಿದ್ದು ಈತ ಸುಮಾರು 6 ತಿಂಗಳುಗಳಿಂದ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈತನ ವಿರುದ್ಧ ನ್ಯಾಯಾಲಯ ವಾರಂಟ್ ಹೊರಡಿಸಿತ್ತು.
ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಎಸಿಪಿ ಪಿ.ಎ. ಹೆಗಡೆ, ಪೊಲೀಸ್ ನಿರೀಕ್ಷಕ ಶ್ಯಾಮ್ ಸುಂದರ್ ಎಚ್. ಎಂ., ಪಿಎಸ್‌ಐಯವರಾದ ರಾಜೇಂದ್ರ ಬಿ., ನರೇಂದ್ರ, ಶರಣಪ್ಪ ಭಂಡಾರಿ, ಸುದೀಪ್ ಎಂ.ವಿ ಹಾಗೂ ಸಿಸಿಬಿ ಸಿಬಂದಿ ಪಾಲ್ಗೊಂಡಿದ್ದರು.