ಶ್ರೀನಗರ : ಕಾಶ್ಮೀರಿ ವಿದ್ಯಾರ್ಥಿಗಳಿಗೆ ಪಾಕಿಸ್ಥಾನದಲ್ಲಿ ಎಂಬಿಬಿಎಸ್ ಸೀಟುಗಳನ್ನು ಮಾರಾಟ ಮಾಡಿದ ಪ್ರಕರಣದಲ್ಲಿ ಹುರಿಯತ್ ನಾಯಕರ ಮನೆ ಸೇರಿದಂತೆ ಮೂರು ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಗುರುವಾರ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅನಂತನಾಗ್‌ನಲ್ಲಿರುವ ಖಾಜಿ ಯಾಸಿರ್, ಬಾಗ್-ಎ-ಮೆಹ್ತಾಬ್ ಪ್ರದೇಶದಲ್ಲಿ ಜಮ್ಮು ಮತ್ತು ಕಾಶ್ಮೀರ ಸಾಲ್ವೇಶನ್ ಮೂವ್ಮೆಂಟ್ ಅಧ್ಯಕ್ಷ ಜಾಫರ್ ಭಟ್ , ಮತ್ತು ಅನಂತನಾಗ್‌ನ ಮಟ್ಟಾನ್ ಪ್ರದೇಶದಲ್ಲಿ ಮೊಹಮ್ಮದ್ ಇಕ್ಬಾಲ್ ಖ್ವಾಜಾ ನಿವಾಸಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕೇಂದ್ರ ತನಿಖಾ ಸಂಸ್ಥೆಯ ಸಿಬಂದಿ ಮತ್ತು ಪೊಲೀಸರು ಮೂರು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಾಕಿಸ್ಥಾನದಲ್ಲಿ ಎಂಬಿಬಿಎಸ್ ಕೋರ್ಸ್ ಕಾಶ್ಮೀರಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡುವ, ಭಯೋತ್ಪಾದನೆಯನ್ನು ಬೆಂಬಲಿಸಲು ಮತ್ತು ಹಣವನ್ನು ಬಳಸುವುದಕ್ಕೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿಗಳನ್ನು ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.