Advertisement
ಈ ಒಡಂಬಡಿಕೆಯಿಂದ ಮೈಸೂರಿನಲ್ಲಿ ಸೆಮಿ ಕಂಡಕ್ಟರ್ ತಯಾರಿ ಘಟಕ ಸ್ಥಾಪನೆಗಾಗಿ 3,750 ಕೋ. ರೂ.ಗಳ ಬಂಡವಾಳ ಹೂಡಿಕೆ ಮಾಡಲಿದ್ದು, 3,200 ಉದ್ಯೋಗ ಸೃಷ್ಟಿಯಾಗಲಿದೆ.ಕೇನ್ಸ್ ಟೆಕ್ನಾಲಜಿಯ ಮೈಸೂರಿನಲ್ಲಿ ಇಎಸ್‌ಡಿಎಂ ಸೆಮಿಕಾನ್ ಪರಿಸರ ವ್ಯವಸ್ಥೆಯ ಪ್ರಮುಖ ನಿರ್ವಹಣ ಸಂಸ್ಥೆಯಾಗಿ ಕಾರ್ಯ ನಿರ್ವಹಿಸಲಿದ್ದು, ಈ ಒಡಂಬಡಿಕೆಯು ಮೈಸೂರು ನಗರವನ್ನು ಜಾಗತಿಕ ನಕ್ಷೆಯಲ್ಲಿ ಗುರುತಿಸಲು ಸಹಾಯ ಮಾಡುತ್ತದೆ. ಕೇನ್ಸ್ ಸೆಮಿಕಾನ್ ಪ್ರೈ. ಲಿ. ಸೆಮಿ ಕಂಡಕ್ಟರ್ ಅಸೆಂಬ್ಲಿ ಮತ್ತು ಟೆಸ್ಟಿಂಗ್ (ಒಎಸ್‌ಎಟಿ) ಸೌಲಭ್ಯದ ಸಂಸ್ಥೆಯಾಗಿದ್ದು, ಬಹು-ಲೇಯರ್ಡ್ ಬೋರ್ಡ್‌ಗಳನ್ನು ಉತ್ಪಾದಿಸಲು ಪ್ರಿಂಟೆಡ್ ಸರ್ಕ್ನೂಟ್ ಬೋರ್ಡ್ (ಪಿಸಿಬಿ) ತಯಾರಿ ಘಟಕವಾಗಿ ಕಾರ್ಯ ನಿರ್ವಹಿಸುತ್ತದೆ.