Advertisement

ಹಿಂದಿನ ಸೆಮಿಸ್ಟರ್‌ ಕತೆ ಗೊತ್ತಿಲ್ಲ, ಆದರೂ ವಿದ್ಯಾರ್ಥಿಗಳಿಗೆ ಮುಂದಿನ ಸೆಮಿಸ್ಟರ್‌ ಆರಂಭ!

07:27 PM May 18, 2021 | Team Udayavani |

ಬೆಂಗಳೂರು: ಕೊರೊನಾ ಹಾವಳಿಯಿಂದ ವಿದ್ಯಾರ್ಥಿಗಳ ಪರೀಕ್ಷೆಗಳು ಅತಂತ್ರವಾಗಿದ್ದು, ಹಿಂದಿನ ಸೆಮಿಸ್ಟರ್‌ ಕತೆ ಏನು ಎನ್ನುವುದೇ ಗೊತ್ತಿಲ್ಲ. ಆಗಲೇ ಮುಂದಿನ ಸೆಮಿಸ್ಟರ್‌ ಅಭ್ಯಾಸ ಮಾಡುತ್ತಿದ್ದಾರೆ!

Advertisement

ರಾಜ್ಯಾದ್ಯಂತ ಕೊರೊನಾ ಹಿನ್ನೆಲೆಯಲ್ಲಿ ಪದವಿ, ಸ್ನಾತಕೋತ್ತರ, ಎಂಜಿನಿಯರಿಂಗ್‌ ವಿದ್ಯಾರ್ಥಿಗಳ ಪ್ರಸ್ತುತ ಸೆಮಿಸ್ಟರ್‌ ಪರೀಕ್ಷೆಗಳನ್ನು ನಡೆಸಿಲ್ಲ. ಹಾಗಾಗಿ, ಹಿಂದಿನ ಸೆಮಿಸ್ಟರ್‌ ಭವಿಷ್ಯ ಅತಂತ್ರವಾಗಿದೆ. ಅಷ್ಟರಲ್ಲಿ ಕೆಲವು ಶಿಕ್ಷಣ ಸಂಸ್ಥೆಗಳಲ್ಲಿ ಮುಂದಿನ ಸೆಮಿಸ್ಟರ್‌ನ ತರಗತಿಗಳು ಶುರುವಾಗಿದ್ದು, ವಿದ್ಯಾರ್ಥಿಗಳು ನಿಯಮಿತವಾಗಿ ಹಾಜರಾಗಿ ಅಭ್ಯಾಸ ಮಾಡುತ್ತಿದ್ದಾರೆ.

ಶಿಕ್ಷಣ ಸಂಸ್ಥೆಗಳ ಈ ನಡೆಯು ವಿದ್ಯಾರ್ಥಿಗಳನ್ನು ಗೊಂದಲಕ್ಕೆ ಸಿಲುಕಿಸಿದ್ದಾರೆ. ಆದರೆ, ತರಗತಿಗಳು ಶುರುವಾಗಿದ್ದರಿಂದ ಅನಿವಾರ್ಯವಾಗಿ ಕೆಲವರು ಶುಲ್ಕ ಪಾವತಿಸಿದ್ದಾರೆ. ಇನ್ನು ಕೆಲವರು ಕಾದುನೋಡುವ ತಂತ್ರ ಅನುಸರಿಸುತ್ತಿದ್ದಾರೆ.

ಶಿಕ್ಷಣ ಸಂಸ್ಥೆಗಳ ಈ ನಡೆ ಬಗ್ಗೆ ಆಲ್‌ ಇಂಡಿಯಾ ಡೆಮಾಕ್ರೆಟಿಕ್‌ ಸ್ಟೂಡೆಂಟ್ಸ್‌ ಆರ್ಗನೈಸೇಷನ್‌ (ಎಐಡಿಎಸ್‌ಒ) ಆಕ್ಷೇಪ ವ್ಯಕ್ತಪಡಿಸಿದ್ದು, ವಿದ್ಯಾರ್ಥಿಗಳ ಹಿಂದಿನ ಸೆಮಿಸ್ಟರ್‌ನ ಭವಿಷ್ಯ ನಿರ್ಧಾರವಾಗದೆ, ಮುಂದಿನ ಸೆಮಿಸ್ಟರ್‌ನ ತರಗತಿಗಳನ್ನು ನಡೆಸುತ್ತಿರುವುದು ಅಪ್ಪಟ ಅವೈಜ್ಞಾನಿಕವಾಗಿದೆ. ಇದು ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕ ಎಂದು ಆರೋಪಿಸಿದೆ.

ಇದನ್ನೂ ಓದಿ :ಸಿಂಗಾಪುರದೊಂದಿಗಿನ ವಿಮಾನಯಾನವನ್ನು ಸ್ಥಗಿತಗೊಳಿಸಿ : ಕೇಂದ್ರಕ್ಕೆ ಕೇಜ್ರಿವಾಲ್ ಮನವಿ

Advertisement

ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ, ಶಿಕ್ಷಣ ತಜ್ಞರು, ಶಿಕ್ಷಕರು, ವಿದ್ಯಾರ್ಥಿಗಳ ಅಭಿಪ್ರಾಯಗಳೊಂದಿಗೆ ವೈಜ್ಞಾನಿಕ ಮೌಲ್ಯಮಾಪನ ಪದ್ಧತಿ ರೂಪಿಸಬೇಕು ಎಂದು ಆಗ್ರಹಿಸಿ ಮಂಗಳವಾರ ಆನ್‌ಲೈನ್‌ ಪ್ರತಿಭಟನೆ ನಡೆಸಿತು. ಇದರಲ್ಲಿ ನೂರಾರು ಜನ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ವೈಜ್ಞಾನಿಕ ಮೌಲ್ಯಮಾಪನ ಪದ್ಧತಿ ಜತೆಗೆ ಶಾಲಾ ಮಕ್ಕಳಿಗೆ ಬಿಸಿ ಊಟಕ್ಕೆ ಸರಿಸಮನಾದ ಪಡಿತರ ಕಿಟ್‌ ವಿತರಿಸಬೇಕು, ಬಸ್‌ ಪಾಸ್‌, ಹಾಸ್ಟೆಲ್‌ ಶುಲ್ಕ ಮತ್ತು ಕಾಲೇಜು ಶುಲ್ಕ ವೆಚ್ಚ ಭರಿಸಲು ವಿದ್ಯಾರ್ಥಿಗಳಿಗೆ ಆರ್ಥಿಕ ಪ್ಯಾಕೇಜ್‌ ಘೊಷಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಎಐಡಿಎಸ್‌ಒ ಒತ್ತಾಯಿಸಿತು.

Advertisement

Udayavani is now on Telegram. Click here to join our channel and stay updated with the latest news.

Next