Advertisement

ಹಿರಿಯ ನಟಿ ಬಿ.ಜಯಾ ನಿಧನ

11:02 PM Jun 03, 2021 | Team Udayavani |

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ.ಜಯಾ (77) ಅವರು ಗುರುವಾರ ನಿಧನ ಹೊಂದಿದ್ದಾರೆ. ಪಾರ್ಶ್ವವಾಯುವಿಗೆ ತುತ್ತಾಗಿದ್ದ ಅವರು ಆಸ್ಪತ್ರೆಯಲ್ಲಿ  ಕೊನೆಯುಸಿರೆಳೆದಿದ್ದಾರೆ. ಅವರು  350ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.

Advertisement

ಚಿತ್ರರಂಗದಲ್ಲಿ “ಕುಳ್ಳಿ ಜಯಾ’ ಎಂದೇ ಖ್ಯಾತರಾಗಿದ್ದ ಅವರು, ಸಾಕಷ್ಟು ವಿಭಿನ್ನ ಪಾತ್ರಗಳ ಮೂಲಕ ಕನ್ನಡ ಚಿತ್ರರಂಗದಲ್ಲಿ ಛಾಪು ಮೂಡಿಸಿದ್ದರು. ನರಸಿಂಹರಾಜು ಅವರ ಜತೆ ಅನೇಕ ಸಿನೆಮಾಗಳಲ್ಲಿ ನಟಿಸಿದ್ದರು. ತಂದೆಯ ಆಸೆಯಂತೆ ರಂಗಭೂಮಿ ಪ್ರವೇಶಿಸಿ  ಚಾಮುಂ ಡೇಶ್ವರಿ ನಾಟಕ ಮಂಡಳಿಯಲ್ಲಿ ಪ್ರಹ್ಲಾದ, ಬಾಲಭೋಜ, ಕೃಷ್ಣ, ಋಷಿಕೇಶ ಮುಂತಾದ ಅನೇಕ ಪಾತ್ರಗಳಲ್ಲಿ ನಟಿಸಿದ್ದರು. ಅನೇಕ ಧಾರಾವಾಹಿಗಳಲ್ಲೂ ಕಾಣಿಸಿಕೊಂಡಿದ್ದಾರೆ.  “ಭಕ್ತಪ್ರಹ್ಲಾದ’  ಮೂಲಕ ಚಿತ್ರರಂಗ ಪ್ರವೇಶಿಸಿದ್ದ ಅವರು ಡಾ| ರಾಜ್‌ಕುಮಾರ್‌, ಕಲ್ಯಾಣ್‌ ಕುಮಾರ್‌, ಉದಯ್‌ ಕುಮಾರ್‌, ಅಂಬರೀಶ್‌, ವಿಷ್ಣುವರ್ಧನ್‌ ಸಹಿತ ಬಹುತೇಕ  ನಟರೊಂದಿಗೆ ನಟಿಸಿದ್ದರು. ಇವರಿಗೆ ರಾಜ್ಯೋತ್ಸವ ಪ್ರಶಸ್ತಿ, ಅತ್ಯುತ್ತಮ ಪೋಷಕ ನಟಿ ರಾಜ್ಯ ಪ್ರಶಸ್ತಿ ಸಂದಿತ್ತು.

Advertisement

Udayavani is now on Telegram. Click here to join our channel and stay updated with the latest news.

Next