Advertisement

ಭಾರತದ ನೂತನ ಅಟಾರ್ನಿ ಜನರಲ್ ಆಗಿ ಹಿರಿಯ ವಕೀಲ ಆರ್.ವೆಂಕಟರಮಣಿ ನೇಮಕ

09:47 PM Sep 28, 2022 | Team Udayavani |

ನವದೆಹಲಿ: ಹಿರಿಯ ವಕೀಲ ಆರ್‌.ವೆಂಕಟರಮಣಿ ಅವರನ್ನು ಅಟಾರ್ನಿ ಜನರಲ್‌ ಆಗಿ ನೇಮಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆದೇಶ ಹೊರಡಿಸಿದ್ದಾರೆ.

Advertisement

ಮೂರು ವರ್ಷಗಳ ಅವಧಿಗೆ ಅಟಾರ್ನಿ ಜನರಲ್‌ ಆಗಿ ವೆಂಕಟರಮಣಿ ಮುಂದುವರಿಯಲಿದ್ದಾರೆ. 42 ವರ್ಷಗಳಿಂದ ವಕೀಲಿ ವೃತ್ತಿಯಲ್ಲಿರುವ ವೆಂಕಟರಮಣಿ, ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲರಾಗಿದ್ದಾರೆ.

ಹಲವು ರಾಜ್ಯ ಸರ್ಕಾರಗಳು, ವಿಶ್ವವಿದ್ಯಾಲಯಗಳು, ಸಾರ್ವಜನಿಕ ವಲಯದ ಸಂಸ್ಥೆಗಳ ಪರವಾಗಿ ಹೈಕೋರ್ಟ್‌ಗಳಲ್ಲಿ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿದ್ದಾರೆ.

ಬೆಂಗಳೂರಿನ ನ್ಯಾಷನಲ್‌ ಲಾ ಸ್ಕೂಲ್‌ ಆಫ್ ಇಂಡಿಯಾ ಯೂನಿವರ್ಸಿಟಿ ಸೇರಿದಂತೆ ಹಲವು ಲಾ ಸ್ಕೂಲ್‌ಗ‌ಳ ಬೋಧಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next