Advertisement

ಹಿರಿಯ ನಿರೂಪಕ ಗಜಾನನ ಹೆಗಡೆ ನಿಧನ

10:46 PM Feb 25, 2020 | Lakshmi GovindaRaj |

ಬೆಂಗಳೂರು: ಖಾಸಗಿ ಸುದ್ದಿವಾಹಿನಿ ನಿರೂಪಕ ಗಜಾನನ ಹೆಗಡೆ (49)ಅವರು ಮಂಗಳವಾರ ನಿಧನರಾದರು. ಇತ್ತೀಚೆಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಆಯ ತಪ್ಪಿ ಬಿದ್ದು ತಲೆಗೆ ಪೆಟ್ಟಾಗಿದ್ದ ಗಜಾನನ ಹೆಗಡೆ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫ‌ಲಿಸದೆ ಮೃತಪಟ್ಟಿದ್ದಾರೆ. ಪತ್ನಿ ಹಾಗೂ ಇಬ್ಬರು ಪುತ್ರರು ಸೇರಿ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Advertisement

ಹೊನ್ನಾವರದ ಮುಗ್ವಾ ಬೆಣ್ಣೆ ಮನೆಯವರಾಗಿದ್ದ ಹೆಗಡೆ ಅವರು ಹಲವು ಖಾಸಗಿ ಸುದ್ದಿವಾಹಿನಿಗಳಲ್ಲಿ ಕಳೆದ 20 ವರ್ಷಗಳಿಂದ ನಿರೂಪಕರಾಗಿ ಕೆಲಸ ನಿರ್ವಹಿಸಿದ್ದರು. ಜತೆಗೆ ಸಂಗೀತ ಮತ್ತು ರಂಗಭೂಮಿ ಕ್ಷೇತ್ರದಲ್ಲೂ ಅಭಿರುಚಿ ಹೊಂದಿದ್ದ ಅವರು ಸಂಗೀತ ಕಾರ್ಯಕ್ರಮಗಳನ್ನು ನಡೆಸಿಕೊಡುತ್ತಿದ್ದರು. ಬುಧವಾರ ಬೆಂಗಳೂರಿನಲ್ಲಿ ಮೃತರ ಪಾರ್ಥಿವ ಶರೀರದ ಅಂತ್ಯಕ್ರಿಯೆ ನಡೆಯಲಿದೆ. ಸಿಎಂ ಬಿ.ಎಸ್‌.ಯಡಿಯೂರಪ್ಪ ಸೇರಿ ಹಲವು ಗಣ್ಯರು ಗಜಾನನ ಹೆಗಡೆ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next