ಪ್ರಯಾಗ್ ರಾಜ್: ಹಿರಿಯ ಬಿಜೆಪಿ ನಾಯಕ ಮತ್ತು ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಕೇಶರಿನಾಥ್ ತ್ರಿಪಾಠಿ ಅವರು ಇಂದು ನಿಧನರಾದರು. ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ರವಿವಾರ ಮುಂಜಾನೆ 5 ಗಂಟೆಗೆ ಇಹಲೋಕ ತ್ಯಜಿಸಿದರು.
ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಮೂರು ಬಾರಿ ಸ್ಪೀಕರ್ ಆಗಿದ್ದ ಕೇಶರಿನಾಥ್ ತ್ರಿಪಾಠಿ ಕಳೆದ ಡಿಸೆಂಬರ್ ನಲ್ಲಿ ಅನಾರೋಗ್ಯದ ಕಾರಣಕ್ಕೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಒಂದು ವಾರಕ್ಕೂ ಹೆಚ್ಚು ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ, ತ್ರಿಪಾಠಿ ಅವರನ್ನು ಮನೆಗೆ ಕರೆತರಲಾಗಿತ್ತು. ಅಲ್ಲಿ ಅವರು ಭಾನುವಾರ ನಸುಕಿನಲ್ಲಿ ನಿಧನರಾದರು.
ತ್ರಿಪಾಠಿ ಅವರಿಗೆ ಎರಡು ಬಾರಿ ಕೋವಿಡ್ 19 ಸೋಂಕು ತಗುಲಿತ್ತು. ಲಕ್ನೋದ ಸಂಜೀವ ಗಾಂಧಿ ಆಸ್ಪತ್ರೆಯಲ್ಲಿ ದೀರ್ಘ ಕಾಲದ ಚಿಕಿತ್ಸೆ ಪಡೆದ ಬಳಿಕ ಗುಣಮುಖರಾಗಿದ್ದರು.
ಇದನ್ನೂ ಓದಿ:ಸೂರ್ಯ ಬ್ಯಾಟಿಂಗ್ ಅಬ್ಬರ: ತುಳುನಾಡ ಅಳಿಯನಿಗೆ ಕೆಎಲ್ ರಾಹುಲ್ ಪ್ರಶಂಸೆ
ಆರು ಬಾರಿ ಉತ್ತರ ಪ್ರದೇಶ ವಿಧಾನಸಭೆಯ ಸದಸ್ಯರಾಗಿದ್ದ ತ್ರಿಪಾಠಿ ಅವರು ಅವರು 1977 ರಿಂದ 1979 ರವರೆಗಿನ ಜನತಾ ಪಕ್ಷದ ಆಡಳಿತದಲ್ಲಿ ಕ್ಯಾಬಿನೆಟ್ ಸಚಿವರಾಗಿದ್ದರು. ಉತ್ತರ ಪ್ರದೇಶ ಬಿಜೆಪಿಯ ರಾಜ್ಯಾಧ್ಯಕ್ಷರಾಗಿಯೂ ಅವರು ಕಾರ್ಯ ನಿರ್ವಹಿಸಿದ್ದರು.