Advertisement

Lal Krishna Advani: ಆಸ್ಪತ್ರೆಗೆ ದಾಖಲಾದ ಬಿಜೆಪಿ ಹಿರಿಯ ನಾಯಕ ಎಲ್‌.ಕೆ.ಅಡ್ವಾಣಿ

08:47 AM Jun 27, 2024 | Team Udayavani |

ನವದೆಹಲಿ: ಬಿಜಿಪಿ ಹಿರಿಯ ನಾಯಕ ಎಲ್‌.ಕೆ.ಅಡ್ವಾಣಿ ಅವರನ್ನು ನವದೆಹಲಿಯ ಅಖೀಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಏಮ್ಸ್‌ ) ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

96 ವರ್ಷದ ಅಡ್ವಾಣಿ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಆದರೆ, ಅನಾರೋಗ್ಯದ ನಿಖರ ಮಾಹಿತಿ ಇನ್ನೂ ತಿಳಿದುಬಂದಿಲ್ಲ. ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದು ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.

ಜನವರಿಯಲ್ಲಿ ತಿಂಗಳ ಹಿಂದೆ ಮಾಜಿ ಉಪ ಪ್ರಧಾನಿಗೆ ದೇಶದ ಅತ್ಯುನ್ನತ ಗೌರವ ಭಾರತ ರತ್ನ ಪ್ರಶಸ್ತಿ ಪ್ರಕಟಿಸಲಾಗಿತ್ತು. ಮಾ. 31ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನವದೆಹಲಿಯಲ್ಲಿರುವ ಬಿಜೆಪಿ ಹಿರಿಯ ನಾಯಕ ಅಡ್ವಾಣಿ ಅವರ ನಿವಾಸಕ್ಕೆ ತೆರಳಿ ಅವರಿಗೆ ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡಿದ್ದರು. ಅಡ್ವಾಣಿ ಅವರು ಜೂನ್‌ 2002ರಿಂದ ಮೇ 2004ರವರೆಗೆ ಭಾರತದ ಉಪ ಪ್ರಧಾನಿ ಯಾಗಿ, ಕೇಂದ್ರ ಗೃಹ ಸಚಿವ ರಾಗಿ ಅಕ್ಟೋಬರ್‌ 1999ರಿಂದ ಮೇ 2004ರ ವರೆಗೆ ಸೇವೆ ಸಲ್ಲಿಸಿದ್ದರು.

ದೇಶದಲ್ಲಿ ಬಿಜೆಪಿ ಬೆಳೆಸುವಲ್ಲಿ ಪ್ರಧಾನ ಪಾತ್ರ ವಹಿಸಿದ್ದ ಅವರು, 1986ರಿಂದ 1990ರ ವರೆಗೆ, 1993ರಿಂದ 1998ರ ವರೆಗೆ ಹಾಗೂ 2004ರಿಂದ 2005ರ ವರೆಗೆ ಮೂರು ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next