Advertisement
ಬಿಜೆಪಿ ಮುಳುಗುತ್ತಿದೆ:ಈ ಸಂದರ್ಭದಲ್ಲಿ ಮಾತನಾಡಿದ ಬಿ.ಕೆ.ಹರಿಪ್ರಸಾದ್ ಅವರು, ಬಿಜೆಪಿ ಮುಳುಗುತ್ತಿರುವ ಹಡಗು. ಬಿಜೆಪಿ ನಾಯಕರು ಕಾಂಗ್ರೆಸ್‌ಗೆ ಸುನಾಮಿ ರೀತಿಯಲ್ಲಿ ಬರುತ್ತಿದ್ದಾರೆ. 47 ಮಂದಿ ಬಿಜೆಪಿಯ ಹಿರಿಯ ನಾಯಕರು ಕಾಂಗ್ರೆಸ್, ಜೆಡಿಎಸ್‌ಗೆ ಸೇರ್ಪಡೆಗೊಂಡಿದ್ದಾರೆ. ಇದರಲ್ಲಿ 6 ಮಂದಿ ವಿಧಾನಪರಿಷತ್ ಸದಸ್ಯರಿದ್ದಾರೆ. ಬಿಜೆಪಿ ಮುಳುಗತ್ತಿದ್ದು ಸದ್ಯ ಪೂರ್ಣ ಮುಳುಗುವುದರಲ್ಲಿ ಸಂಶಯವಿಲ್ಲ. ಈ ಬಾರಿ ಎಲ್ಲೆಡೆಯೂ ಜನರಿಂದ ಕಾಂಗ್ರೆಸ್‌ಗೆ ಅಭೂತಪೂರ್ವ ಬೆಂಬಲ ದೊರೆಯುತ್ತಿದೆ. ಕಾಂಗ್ರೆಸ್ ಸರಕಾರ ರಚಿಸುವುದರಲ್ಲಿ ಯಾರಿಗೂ ಸಂಶಯ ಬೇಡ ಎಂದು ಹೇಳಿದರು.
Related Articles
Advertisement
ಸತೀಶ್ ಪ್ರಭು ಅವರು 1988ರಿಂದ ಬಿಜೆಪಿ ಯುವಮೋರ್ಚಾದಲ್ಲಿ, ವಿ.ಸಭಾ ಕ್ಷೇತ್ರದ ಅಧ್ಯಕ್ಷರಾಗಿ, ಜಿಲ್ಲಾ ವಕ್ತಾರರಾಗಿ ಕಾರ್ಯನಿರ್ವಹಿಸಿದ್ದರು. ಸಂಘನಿಕೇತನ ಗಣೇಶೋತ್ಸವದ ಅಧ್ಯಕ್ಷರಾಗಿದ್ದರು. ರಥಬೀದಿ ವೆಂಕಟರಮಣ ದೇವಸ್ಥಾನದ ಟ್ರಸ್ಟಿಯಾಗಿದ್ದಾರೆ.
ಬಿಜೆಪಿಯಲ್ಲಿ ಜನಹಿತ ಸಾಧನೆ ಅಸಾಧ್ಯ: ಸತೀಶ್ ಪ್ರಭುಸುಮಾರು ಮೂರೂವರೆ ದಶಕದಿಂದ ಬಿಜೆಪಿಯಲ್ಲಿ ಹಲವು ಜವಾಬ್ದಾರಿಗಳನ್ನು ನಿರ್ವಹಿಸಿದ್ದೇನೆ. ಯಾವುದೇ ಅಧಿಕಾರ, ಹುದ್ದೆಗಾಗಿ ನಾನು ರಾಜಕೀಯಕ್ಕೆ ಸೇರಿಲ್ಲ. ಜನಹಿತ ಸಾಧನೆ ನನ್ನ ಉದ್ದೇಶ. ಆದರೆ ಇತ್ತೀಚಿನ ದಿನಗಳಲ್ಲಿ ಬಿಜೆಪಿಯಲ್ಲಿ ಇದು ಅಸಾಧ್ಯ ಎಂಬುದಾಗಿ ಮನಗಂಡು ಜನಹಿತ ಸಾಧನೆಯನ್ನು ಪ್ರಾಮಾಣಿಕವಾಗಿ ಮಾಡಬೇಕೆಂದು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದೇನೆ. ಈ ಜಿಲ್ಲೆಯಲ್ಲಿ ಈ ಹಿಂದೆಯೂ ಜಿಎಸ್‌ಬಿ ಸಮಾಜಕ್ಕೆ ಸೇರಿದ ಪ್ರತಿನಿಧಿಗಳು ಸಾಧನೆ ಮಾಡಿ ಕಾಂಗ್ರೆಸ್ ಪಕ್ಷದ ಕೀರ್ತಿ ಪತಾಕೆ ಹಾರಿಸಿದ್ದಾರೆ. ಅಂತಹ ಗತವೈಭವವನ್ನು ಮರಳಿ ತರಬೇಕು, ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂಬ ಉದ್ದೇಶ ನನ್ನದಾಗಿದೆ ಎಂದು ಸತೀಶ್ ಪ್ರಭು ಹೇಳಿದರು.