Advertisement

Leader Of Opposition ಆಗಿ ಬಿಜೆಪಿ ಹಿರಿಯ ಶಾಸಕ ಆರ್. ಅಶೋಕ್ ಆಯ್ಕೆ

08:37 PM Nov 17, 2023 | Team Udayavani |

ಬೆಂಗಳೂರು: ನಗರದ ಐಟಿಸಿ ಗಾರ್ಡೇನಿಯಾ ಹೊಟೇಲ್‌ನಲ್ಲಿ ಶುಕ್ರವಾರ ಸಂಜೆ ನಡೆಸಲಾದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ವಿಧಾನಸಭೆಯ ವಿಪಕ್ಷ ನಾಯಕನಾಗಿ ಬಿಜೆಪಿ ಹಿರಿಯ ಶಾಸಕ , ಮಾಜಿ ಡಿಸಿಎಂ ಆರ್.ಅಶೋಕ್ ಅವರನ್ನು ಆಯ್ಕೆ ಮಾಡಲಾಗಿದೆ.

Advertisement

ರಾಜ್ಯಾಧ್ಯಕ್ಷ ಸ್ಥಾನ ಲಿಂಗಾಯತ ಸಮುದಾಯಕ್ಕೆ ಮಣೆ ಹಾಕಿದರೆ, ವಿಪಕ್ಷ ನಾಯಕ ಸ್ಥಾನಕ್ಕೆ ನಿರ್ಣಾಯಕ ಒಕ್ಕಲಿಗ ಸಮುದಾಯಕ್ಕೆ ಮಣೆ ಹಾಕಲಾಗಿದೆ.

ಇದನ್ನೂ ಓದಿ: BJP; ವಿಪಕ್ಷ ನಾಯಕನ ಆಯ್ಕೆ:ಮಹತ್ವದ ಸಭೆಗೆ ಯತ್ನಾಳ್ ಸೇರಿ ಐವರು ಶಾಸಕರು ಗೈರು

66 ರ ಹರೆಯದ ಅಶೋಕ್ ಅವರು ಆರ್ ಎಸ್ ಎಸ್ ಹಿನ್ನಲೆ ಹೊಂದಿದ್ದು, ಈ ಹಿಂದೆ  ವಿಧಾನಸಭೆಯ ವಿಪಕ್ಷದ ಉಪನಾಯಕರಾಗಿ (2014-2018), ಉಪಮುಖ್ಯಮಂತ್ರಿಯಾಗಿ, ಕಂದಾಯ , ಗೃಹ ಮತ್ತು ಸಾರಿಗೆ ಸಚಿವರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದು, ಬಿಜೆಪಿ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.ಕ್ಷೇತ್ರ ಮರುವಿಂಗಡಣೆಗೆ ಮುನ್ನ ಮೂರು ಬಾರಿ ಉತ್ತರಳ್ಳಿ ವಿಧಾನಸಭಾ ಕ್ಷೇತ್ರದಿಂದ, ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಿಂದ ನಿರಂತರವಾಗಿ ನಾಲ್ಕು ಬಾರಿ ಸೇರಿ ಒಟ್ಟು ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next