Advertisement

ವಿಶ್ವ ಹಿರಿಯ ನಾಗರಿಕರ ದಿನಾಚರಣೆ: 6 ಸಾಧಕರು, ಒಂದು ಸಂಸ್ಥೆಗೆ ಪ್ರಶಸ್ತಿ

07:52 PM Sep 30, 2022 | Team Udayavani |

ಬೆಂಗಳೂರು: ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಹಿನ್ನೆಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ತೋರಿದ 6 ಮಂದಿ ಹಿರಿಯ ನಾಗರಿಕರಿಗೆ ಮತ್ತು ಒಂದು ಸಂಸ್ಥೆಗೆ ಶನಿವಾರ (ಅ.1) ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

Advertisement

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಸಚಿವ ಹಾಲಪ್ಪ ಆಚಾರ್‌ ಅವರು, ಶಿಕ್ಷಣ, ಸಾಹಿತ್ಯ, ಕಲೆ, ಸಮಾಜಸೇವೆ, ಕ್ರೀಡೆ ಮತ್ತು ಕಾನೂನು ಸಹಿತ ವಿವಿಧ ಕ್ಷೇತ್ರಗಳಲ್ಲಿ ತಮ್ಮದೇ ಆದ ಕೊಡುಗೆ ನೀಡುತ್ತಾ ಬಂದಿರುವ ಸಾಧಕರಿಗೆ ಮತ್ತು ಒಂದು ಸಂಸ್ಥೆಗೆ ಪ್ರಶಸ್ತಿ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಈ ಪ್ರಶಸ್ತಿಯು 1 ಲಕ್ಷ ರೂ. ಮತ್ತು ಸ್ಮರಣಿಕೆ ಒಳಗೊಂಡಿರುತ್ತದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಏರ್ಪಡಿಸಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌, ಎ. ನಾರಾಯಣ ಸ್ವಾಮಿ, ರಾಜೀವ್‌ ಚಂದ್ರಶೇಖರ್‌ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

ಪ್ರಶಸ್ತಿ ಪುರಸ್ಕೃತರು
ವಿರಾಜಪೇಟೆಯ ಎಂ.ಎಂ.ಬೋಪಯ್ಯ (ಶಿಕ್ಷಣ), ಹುಬ್ಬಳ್ಳಿಯ ಡಾ| ಬಿ.ಕೆ.ಬಸವರಾಜ ರಾಜಋಷಿ (ಸಾಹಿತ್ಯ), ವೆಂಕಪ್ಪ ಅಂಬಾಜಿ ಸುಗತೇಕರ (ಕಲಾ), ಕೊಪ್ಪಳದ ಡಾ| ಕೆ.ಜಿ.ಕುಲಕರ್ಣಿ (ಸಮಾಜಸೇವೆ), ಮೈಸೂರಿನ ವಿಜಯ ರಮೇಶ್‌ (ಕ್ರೀಡಾ), ಬೆಂಗಳೂರಿನ ಡಾ| ಕೋಡೂರು ವೆಂಕಟೇಶ್‌ (ಕಾನೂನು) ಹಾಗೂ ತೀರ್ಥಹಳ್ಳಿ ತಾಲೂಕು ಬಸವಾನಿಯ ಸಾವಿತ್ರಮ್ಮ ರಾಮಶರ್ಮ ಸೇವಾ ಟ್ರಸ್ಟ್‌.

Advertisement

Udayavani is now on Telegram. Click here to join our channel and stay updated with the latest news.

Next