Advertisement

ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಅರೋಗ್ಯ ಸ್ಥಿತಿ ಗಂಭೀರ

04:51 PM Nov 15, 2020 | sudhir |

ನವದೆಹಲಿ : ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಅವರ ಅರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

Advertisement

ಕಳೆದ ಅಕ್ಟೋಬರ್ 1ರಂದು ಅವರಿಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಹೋಮ್ ಐಸೋಲೇಷನ್ ಗೆ ಒಳಗಾಗಿದ್ದರು ಆದರೆ ನಂತರದಲ್ಲಿ ಆರೋಗ್ಯದ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಗುರುಗ್ರಾಮದ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದ್ದು ಇದೀಗ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸದ್ಯ ನಮ್ಮ ತಂದೆಯ ಅರೋಗ್ಯ ಸ್ಥಿರವಾಗಿದ್ದು ವೈದ್ಯರ ಸಲಹೆಯಂತೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಯನ್ನು ಮುಂದುವರೆಸಲಾಗಿದೆ ಎಂದು ಅಹ್ಮದ್ ಪಟೇಲ್ ಅವರ ಮಗ ಫೈಸಲ್ ತಮ್ಮ ಟ್ವಿಟರ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next