Advertisement

ಕಾಂಗ್ರೆಸ್ ಹಿರಿಯ ನಾಯಕ ಅಹಮದ್ ಪಟೇಲ್ ವಿಧಿವಶ

07:25 AM Nov 25, 2020 | keerthan |

ಹೊಸದಿಲ್ಲಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಅಹಮದ್ ಪಟೇಲ್ ಅಲ್ಪ ಕಾಲದ ಅನಾರೋಗ್ಯದ ಕಾರಣ ಇಂದು ಮುಂಜಾನೆ ನಿಧನ ಹೊಂದಿದರು. ಅಹಮದ್ ಪಟೇಲ್ ಅವರಿಗೆ 71 ವರ್ಷ ವಯಸ್ಸಾಗಿತ್ತು.

Advertisement

ಕೋವಿಡ್ ಪಾಸಿಟವ್ ಆದ ಕಾರಣ ತಿಂಗಳ ಹಿಂದೆ ಹೊಸದಿಲ್ಲಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ನಂತರ ಪಟೇಲ್ ಅವರ ಆರೋಗ್ಯ ಕ್ಷೀಣಿಸಿದ್ದು, ಬಹುಅಂಗಾಂಗ ವೈಫಲ್ಯದಿಂದ ಇಂದು ಮುಂಜಾನೆ 3.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ ಎಂದು ಅಹಮದ್ ಪಟೇಲ್ ಪುತ್ರ ಫೈಸಲ್ ಪಟೇಲ್  ತಿಳಿಸಿದ್ದಾರೆ.

ನಮ್ಮ ತಂದೆ ನಿಧನರಾಗಿದ್ದಾರೆಂದು ತಿಳಿಸಲು ವಿಷಾದಿಸುತ್ತೇನೆ. ಸುಮಾರು ಒಂದು ತಿಂಗಳ ಹಿಂದೆ ಕೋವಿಡ್-19 ಪಾಸಿಟಿವ್ ಬಂದ ನಂತರ, ಬಹುಅಂಗಾಂಗ ವೈಫಲ್ಯದಿಂದ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿತ್ತು. ಇಂದು ಮುಂಜಾನೆ 3.30ಕ್ಕೆ ಅವರು ನಿಧನ ಹೊಂದಿದರು ಎಂದು ಫೈಜಲ್ ಟ್ವೀಟ್​ನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ:ಬರಲಿದೆ ಪಂಚಾಯತ್‌ಗೊಂದು ಪವಿತ್ರ ವನ

ಅಹಮದ್ ಪಟೇಲ್ ಅವರು ಗುಜರಾತ್ ರಾಜ್ಯದಲ್ಲಿರುವ ಭರೂಚ್​ನಲ್ಲಿ ಆಗಸ್ಟ್ 21ರ 1949ರಲ್ಲಿ ಜನಿಸಿದವರು. 1976ರಲ್ಲಿ ಭರೂಚ್ ಸ್ಥಳೀಯ ಸಂಸ್ಥೆ ಚುನಾವಣೆ ಮೂಲಕ ರಾಜಕಾರಣಕ್ಕೆ ಕಾಲಿಟ್ಟಿದ್ದರು.

Advertisement

ಹಾಲಿ ರಾಜ್ಯಸಭಾ ಸದಸ್ಯರಾಗಿದ್ದ ಅಹಮದ್ ಪಟೇಲ್ ಒಟ್ಟು 8 ಬಾರಿ ಸಂಸದರಾಗಿದ್ದರು. ಎಐಸಿಸಿಯ ಖಜಾಂಚಿಯೂ ಆಗಿದ್ದ ಅವರು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ನಾಯಕರಲ್ಲೇ ಅತ್ಯಂತ ಹೆಚ್ಚು‌ ಪ್ರಭಾವಿ ಎನಿಸಿದ್ದರು. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಬಹಳ ವರ್ಷ ರಾಜಕೀಯ ಕಾರ್ಯದರ್ಶಿಯೂ ಆಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next