Advertisement

ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಕ್ಯಾ. ಸತೀಶ್ ಶರ್ಮಾ ನಿಧನ

09:06 AM Feb 18, 2021 | Team Udayavani |

ಪಣಜಿ: ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ, ಗಾಂಧಿ ಕುಟುಂಬಕ್ಕೆ ಹತ್ತಿರವಿದ್ದ ಕ್ಯಾಪ್ಟನ್ ಸತೀಶ್ ಶರ್ಮಾ ಬುಧವಾರ ರಾತ್ರಿ ನಿಧನ ಹೊಂದಿದ್ದಾರೆ.

Advertisement

73 ವರ್ಷದ ಕ್ಯಾಪ್ಟನ್ ಸತೀಶ್ ಶರ್ಮಾ ಅವರು ರಾಯ್ ಬರೇಲಿ ಮತ್ತು ಅಮೇಥಿ ಕ್ಷೇತ್ರಗಳಂದ ಗೆದ್ದು ಮೂರು ಬಾರಿ ಲೋಕಸಭಾ ಸದಸ್ಯರಾಗಿದ್ದರು. ಕಳೆದ ಕೆಲವು ಸಮಯದಿಂದ ಅವರು ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದರು.

ಇದನ್ನೂ ಓದಿ:“ಅಪ್ಪನ ಹಂತಕರನ್ನು ಕ್ಷಮಿಸುವೆ’  ರಾಹುಲ್‌ ಗಾಂಧಿ

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರಿಗೆ ಕ್ಯಾಪ್ಟನ್ ಸತೀಶ್ ಶರ್ಮಾ ನಿಕಟವರ್ತಿಯಾಗಿದ್ದರು. 1993ರಿಂದ 1996ರವರೆಗೆ ಪಿವಿ ನರಸಿಂಹ ರಾವ್ ಅವರು ಪ್ರಧಾನಿಯಾಗಿದ್ದಾಗ ಸತೀಶ್ ಶರ್ಮಾ ಅವರು ಪೆಟ್ರೋಲಿಯಂ ಖಾತೆ ಸಚಿವರಾಗಿದ್ದರು.

1947ರ ಅಕ್ಟೋಬರ್ 11ರಂದು ಆಂಧ್ರಪ್ರದೇಶದ ಸಿಕಂದರಾಬಾದ್‌ನಲ್ಲಿ ಸತೀಶ್ ಶರ್ಮಾ ಜನಿಸಿದ್ದರು. ವೃತ್ತಿಪರ ಕಮರ್ಷಿಯಲ್ ಪೈಲಟ್ ಆಗಿದ್ದ ಅವರು ರಾಜೀವ್ ಗಾಂಧಿ ಅವರ ಒತ್ತಾಯದ ಮೇರೆಗೆ 1983ರಲ್ಲಿ ರಾಜಕೀಯ ಪ್ರವೇಶ ಮಾಡಿದ್ದರು.

Advertisement

ರಾಜೀವ್ ಗಾಂಧಿ ಹತ್ಯೆ ಬಳಿಕ 1991ರಲ್ಲಿ ಅಮೇಥಿಯಿಂದ ಲೋಕಸಭೆಗೆ ಆಯ್ಕೆಯಾಗಿದ್ದರು. 1998ರಿಂದ 2004ರವರೆಗೂ ಅವರು ರಾಯ್ ಬರೇಲಿ ಸಂಸದರಾಗಿದ್ದರು. 2004ರ ಜುಲೈನಿಂದ 2016ರವರೆಗೂ ಮಧ್ಯಪ್ರದೇಶ, ಉತ್ತರಾಖಂಡ ಮತ್ತು ಉತ್ತರ ಪ್ರದೇಶಗಳಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next