Advertisement

ಗುರುದಾಸ್‌ ಕಾಮತ್‌ ನಿಧನ

06:00 AM Aug 23, 2018 | Team Udayavani |

ಹೊಸದಿಲ್ಲಿ: ಮಹಾರಾಷ್ಟ್ರದ ಹಿರಿಯ ಕಾಂಗ್ರೆಸ್‌ ನಾಯಕ ಗುರುದಾಸ್‌ ಕಾಮತ್‌  (63) ಹೃದಯಾಘಾತದಿಂದ ನಿಧನರಾಗಿದ್ದಾರೆ. ನವದಿಲ್ಲಿ ಪ್ರವಾಸದಲ್ಲಿದ್ದ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ,  ಚಿಕಿತ್ಸೆ ಫ‌ಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಕಾಂಗ್ರೆಸ್‌ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ,  ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಪ್ರಮುಖ ಗಣ್ಯರು ಕಂಬನಿ ಮಿಡಿದಿದ್ದಾರೆ.  ಐದು ಬಾರಿ ಮುಂಬೈನಿಂದ ಸಂಸದರಾಗಿದ್ದ ಕಾಮತ್‌, ಕೇಂದ್ರ ಗೃಹ ಖಾತೆ ಸಹಾಯಕ ಸಚಿವರಾಗಿಯೂ ಕಾಮತ್‌ ಕಾರ್ಯನಿರ್ವಹಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next