Advertisement

ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ಆಸ್ಪತ್ರೆಗೆ ದಾಖಲು

03:54 PM Jun 10, 2020 | keerthan |

ಮಂಗಳೂರು: ಹಿರಿಯ ಕಾಂಗ್ರೆಸ್ ಮುಖಂಡ, ರಾಜ್ಯಸಭಾ ಸಂಸದ ಆಸ್ಕರ್ ಫರ್ನಾಂಡಿಸ್ ಅವರನ್ನು ಅನಾರೋಗ್ಯದ ಕಾರಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

79 ವರ್ಷ ಪ್ರಾಯದ ಆಸ್ಕರ್ ಫರ್ನಾಂಡಿಸ್ ಅವರು ಎದೆ ನೋವು ಮತ್ತು ಕಿಡ್ನಿ ಸಮಸ್ಯೆಯಿಂದ ಅವರು ಬಳಲುತ್ತಿದ್ದರು. ಹೀಗಾಗಿ ಅವರನ್ನು ಜೂನ್ ಎಂಟರಂದು ನಗರದ ಕೊಡಿಯಾಲಬೈಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿಲಾಗುತ್ತಿದೆ.

ಹಿರಿಯ ಕಾಂಗ್ರೆಸ್ ಮುಖಂಡ ಎದೆ ನೋವು ಮತ್ತು ಕಿಡ್ನಿ ಸಮಸ್ಯೆಯಿಂದ ಅವರು ಬಳಲುತ್ತಿದ್ದು, ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ಚೇತರಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿದೆ.

ರಾಜ್ಯಸಭಾ ಸಂಸದರಾಗಿರುವ ಆಸ್ಕರ್ ಫರ್ನಾಂಡಿಸ್ ಅವರು ಲಾಕ್ ಡೌನ್ ಗಿಂತ ಮೊದಲು ಹೊಸದಿಲ್ಲಿಯಲ್ಲಿದ್ದರು.  ಲಾಕ್ ಡೌನ್ ಘೋಷಣೆಯಾದಾಗ ಕೊನೆಯ ವಿಮಾನದಲ್ಲಿ ಮಂಗಳೂರಿಗೆ ಬಂದಿದ್ದರು.

ಉಡುಪಿ ಮೂಲದವರಾದ ಆಸ್ಕರ್ ಫರ್ನಾಂಡಿಸ್ ಅವರು ಉಡುಪಿ ಲೋಕಸಭಾ ಕ್ಷೇತ್ರದಂದ ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಮನಮೋಹನ್ ಸಿಂಗ್ ಅವರ ಮೊದಲ ಅವಧಿಯ ಸರಕಾರದಲ್ಲಿ ಕೇಂದ್ರ ಸಚಿವರಾಗಿ ಕೆಲಸ ನಿರ್ವಹಿಸಿದ್ದರು. ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಉತ್ತಮ ಹಿಡಿತ ಹೊಂದಿರುವ ಆಸ್ಕರ್ ಫರ್ನಾಂಡಿಸ್ ಅವರು ಸದ್ಯ ರಾಜ್ಯಸಭಾ ಸಂಸದರಾಗಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next