Advertisement

ಹಿರಿಯ ಚಿತ್ರ ಕಲಾವಿದ ರಾಮ್‌ದಾಸ್‌ ಇನ್ನಿಲ್ಲ

06:53 AM May 19, 2019 | Lakshmi GovindaRaj |

ಬೆಂಗಳೂರು: ಚಿತ್ರಕಲಾ ಕ್ಷೇತ್ರದಲ್ಲಿ ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದ್ದ ಕನ್ನಡಿಗ ಪ್ರೊ.ರಾಮ್‌ದಾಸ್‌ ಅಡ್ಯಂತಾಯ (71)ಇನ್ನಿಲ್ಲ. ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಪ್ರೊ.ರಾಮದಾಸ್‌ ಅಡ್ಯಂತಾಯ ಅವರು ಶನಿವಾರ ಸಂಜೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದರು.

Advertisement

ಅನಾರೋಗ್ಯದ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದಷ್ಟೇ ಆಸ್ಪತ್ರೆಗೆ ದಾಖಲಾಗಿದ್ದರು. ಪ್ರೊ.ರಾಮ್‌ದಾಸ್‌ ಅಡ್ಯಂತಾಯ ಅವರ ಪಾರ್ಥಿವ ಶರೀರವನ್ನು ಮೈಸೂರಿಗೆ ಕೊಂಡೊಯ್ಯಲಾಗಿದ್ದು, ಭಾನುವಾರ ಮಧ್ಯಾಹ್ನ 3 ಗಂಟೆಗೆ ಅಂತಿಮ ವಿಧಿ -ವಿಧಾನಗಳು ನಡೆಯಲಿವೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ. ಮಂಗಳೂರು ಮೂಲದ ರಾಮದಾಸ್‌ ಚಿತ್ರಕಲಾ ಕ್ಷೇತ್ರದಲ್ಲಿ ಡಿಪ್ಲೋಮ ಪದವಿ ಪಡೆದಿದ್ದರು.

ಕಲಾ ಕ್ಷೇತ್ರದ ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದ್ದ ಅವರು, ದೆಹಲಿಯ ಲಲಿತಕಲಾ ಅಕಾಡೆಮಿ ನೀಡುವ 44ನೇ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದರು. ಅಲ್ಲದೆ ಸೇರಿದಂತೆ ಹಲವು ಪ್ರಶಸ್ತಿಗೆ ಪಾತ್ರರಾಗಿದ್ದರು. ಮೈಸೂರಿನ ಚಾಮರಾಜೇಂದ್ರ ದೃಶ್ಯ ಕಲಾ ಅಕಾಡೆಮಿಯ ಡೀನ್‌ ಆಗಿ ಸೇವೆ ಸಲ್ಲಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next