ಬಿಹಾರ: ಬಿಹಾರದ ವಿದ್ಯುತ್ ಸಚಿವಾಲಯದ ಟೆಂಡರ್ ಹಗರಣದಲ್ಲಿ ಭಾಗಿಯಾಗಿದ್ದಕ್ಕಾಗಿ ಐಎಎಸ್ ಅಧಿಕಾರಿ ಸಂಜೀವ್ ಹನ್ಸ್ ಮತ್ತು ಆರ್‌ಜೆಡಿ ಮಾಜಿ ಶಾಸಕ ಗುಲಾಬ್ ಯಾದವ್ ಅವರನ್ನು ಜಾರಿ ನಿರ್ದೇಶನಾಲಯ ಶುಕ್ರವಾರ(ಅ.18) ಬಂಧಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಪ್ರಕರಣಕ್ಕೆ ಸಂಬಂಧಿಸಿ ಹನ್ಸ್ ಅವರನ್ನು ಬಿಹಾರದ ಪಾಟ್ನಾದಿಂದ ಬಂಧಿಸಲಾಗಿದ್ದರೆ, ಯಾದವ್ ಅವರನ್ನು ದೆಹಲಿಯಿಂದ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಸೆಕ್ಷನ್‌ಗಳ ಅಡಿಯಲ್ಲಿ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.
ಝಂಜರ್‌ಪುರದ ಮಾಜಿ ಶಾಸಕ ಗುಲಾಬ್ ಯಾದವ್ ಅವರು ಹನ್ಸ್ ಅವರ ನಿಕಟವರ್ತಿಯಾಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹನ್ಸ್, 1997-ಬ್ಯಾಚ್ ಭಾರತೀಯ ಆಡಳಿತ ಸೇವೆ (IAS) ಅಧಿಕಾರಿ, ಬಿಹಾರ ಇಂಧನ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ ಮತ್ತು ಯಾದವ್ ಮಾಜಿ ರಾಷ್ಟ್ರೀಯ ಜನತಾ ದಳ (RJD) ಶಾಸಕರಾಗಿದ್ದು 2015 ರಿಂದ 2020 ರವರೆಗೆ ಮಧುಬನಿ ಜಿಲ್ಲೆಯ ಝಂಜರ್‌ಪುರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.
ಟೆಂಡರ್ ಹಗರಣ, ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಹನ್ಸ್ ನಿವಾಸದ ಮೇಲೆ ಇಡಿ ದಾಳಿ ನಡೆಸಿತ್ತು ಅಲ್ಲದೆ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಹನ್ಸ್ ಅವರ ಮನೆಯಲ್ಲಿ ಹಲವು ದಾಖಲೆಗಳು ಸಿಕ್ಕಿದ್ದು ಇದರ ಹಿಂದೆ ಅವರ ಕುಟುಂಬ ಸದಸ್ಯರು ಸೇರಿದಂತೆ ಹಲವು ಮಂದಿಯ ವಿದುದ್ದ ಪ್ರಕರಣ ಸಾಕಲಾಗಿತ್ತು.
ಐಎಎಸ್ ಅಧಿಕಾರಿ ಸಂಜೀವ್ ಹನ್ಸ್ ಅವರು ಇಂಧನ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು ಈ ವೇಳೆ ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡು ಹಣ ಸಂಪಾದನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.
ಇದನ್ನೂ ಓದಿ: Mudhol: ಘಟಪ್ರಭಾ ನದಿಗೆ ಹರಿದು ಬಂದ ಹೆಚ್ಚಿನ ನೀರು… ಮುಳುಗಿದ ಬ್ಯಾರೇಜ್