Advertisement

ಪೊಲೀಸ್ ಇಲಾಖೆಗೆ ಸರ್ಜರಿ: ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಬಿ.ದಯಾನಂದ ನೇಮಕ

12:50 PM May 30, 2023 | Team Udayavani |

ಬೆಂಗಳೂರು: ನೂತನ ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಗೆ ಸರ್ಜರಿ ಮಾಡಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಪ್ರತಾಪ್ ರೆಡ್ಡಿ ಅವರನ್ನು ಆಂತರಿಕ ಭದ್ರತೆ ಡಿಜಿಪಿಯಾಗಿ ವರ್ಗಾವಣೆ ಮಾಡಿದೆ. ನೂತನ ಕಮಿಷನರ್ ಆಗಿ ಬಿ.ದಯಾನಂದ ಅವರನ್ನು ನೇಮಿಸಲಾಗಿದೆ.

Advertisement

ಎಡಿಜಿಪಿ ಮತ್ತು ನಗರ ಟ್ರಾಫಿಕ್ ವಿಶೇಷ ಆಯುಕ್ತರಾಗಿದ್ದ ಡಾ.ಎಂ.ಎ ಸಲೀಂ ಅವರನ್ನು ಬೆಂಗಳೂರು ಅಪರಾಧ ತನಿಖೆ ವಿಭಾಗ, ವಿಶೇಷ ಘಟಕಗಳು ಮತ್ತು ಆರ್ಥಿಕ ಅಪರಾಧ ವಿಭಾಗದ ಡಿಜಿಯಾಗಿ ವರ್ಗಾವಣೆ ಮಾಡಿ ನೇಮಿಸಲಾಗಿದೆ.

ಇದನ್ನೂ ಓದಿ:Ira Khan: ದುಬಾರಿ ಕಾರು ಬಿಟ್ಟು ಆಟೋದಲ್ಲಿ ಪ್ರಯಾಣಿಸಿದ ಆಮಿರ್‌ ಪುತ್ರಿ; ಫ್ಯಾನ್ಸ್‌ ಖುಷ್

ಬೆಂಗಳೂರು ಅಪರಾಧ ತನಿಖೆ ವಿಭಾಗದ ಎಡಿಜಿಪಿಯಾಗಿದ್ದ ಕೆ.ವಿ ಶರತ್ ಚಂದ್ರ ಅವರನ್ನು ಇಂಟಲಿಜೆನ್ಸ್ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next