Advertisement

ರಾಜ್ಯದ ನೂತನ ಡಿಜಿ –ಐಜಿಪಿಯಾಗಿ ಪ್ರವೀಣ್ ಸೂದ್ ನೇಮಕ

09:36 AM Feb 01, 2020 | Hari Prasad |

ಬೆಂಗಳೂರು: ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಮತ್ತು ಇನ್ ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ (ಐಜಿ) ಆಗಿ ಹಿರಿಯ ಐ.ಪಿ.ಎಸ್. ಅಧಿಕಾರಿ ಪ್ರವೀಣ್ ಸೂದ್ ಅವರನ್ನು ನೇಮಿಸಿ ರಾಜ್ಯ ಸರಕಾರ ಇಂದು ಆದೇಶ ಹೊರಡಿಸಿದೆ.

Advertisement

1986ನೇ ಬ್ಯಾಚ್ ನ ಐ.ಪಿ.ಎಸ್. ಅಧಿಕಾರಿಯಾಗಿರುವ ಪ್ರವೀಣ್ ಸೂದ್ ಅವರು ಬೆಂಗಳೂರಿನಲ್ಲಿ ಅಪರಾಧ ತನಿಖಾ ವಿಭಾಗ, ವಿಶೇಷ ದಳ ಮತ್ತು ಆರ್ಥಿಕ ಅಪರಾಧಗಳ ಪೊಲೀಸ್ ಮಹಾ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ರಾಜ್ಯದ ಡಿಜಿ ಮತ್ತು ಐಜಿಯಾಗಿ ಇದುವರೆಗೆ ಅಧಿಕಾರದಲ್ಲಿದ್ದ ನೀಲಮಣಿ ರಾಜು ಅವರು ನಿವೃತ್ತರಾದ ಹಿನ್ನಲೆಯಲ್ಲಿ ಪ್ರವೀಣ್ ಸೂದ್ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಈ ಆದೇಶವನ್ನು ಹೊರಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next