Advertisement

ಸಮನ್ವಯ ಕವಿ ನಾಡೋಜ ಚಣ್ಣವೀರ ಕಣವಿ ಇನ್ನಿಲ್ಲ

10:36 AM Feb 16, 2022 | Team Udayavani |

ಧಾರವಾಡ: ಕನ್ನಡದ ಸಮನ್ವಯ ಕವಿ, ಸುನೀತಗಳ ಸಾಮ್ರಾಟ ಎಂದು ಪ್ರಸಿದ್ಧಿರಾದ ಹಿರಿಯ ಕವಿ, ನಾಡೋಜ ಚನ್ನವೀರ ಕಣವಿ (93) ಅವರು ವಿಧಿವಶರಾಗಿದ್ದಾರೆ.

Advertisement

ಕಳೆದ ಕೆಲವು ದಿನಗಳಿಂದ ಅನಾರೋಗ್ಯದ ಕಾರಣದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 93 ವರ್ಷದ ಚನ್ನವೀರ ಕಣವಿ ಅವರಿಗೆ ಕೋವಿಡ್ ಸೋಂಕು ತಗುಲಿತ್ತು. ಉಸಿರಾಟದ ತೊಂದರೆಯೂ ಕಾಣಿಸಿಕೊಂಡಿತ್ತು. ಧಾರವಾಡದ ಎಸ್.ಡಿ.ಎಂ ಆಸ್ಪತ್ರೆಗೆ ಜನವರಿ 14ರಂದು ದಾಖಲಿಸಲಾಗಿತ್ತು.

ಜೂನ್ 28,1928ರಂದು ಧಾರವಾಡ ಜಿಲ್ಲೆಯ ಹೊಂಬಳದಲ್ಲಿ ಚನ್ನವೀರ ಕಣವಿಯವರು ಜನಿಸಿದರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಬಿಎ ಮತ್ತು ಎಂಎ ಪದವಿ ಪಡೆದರು. ಕರ್ನಾಟಕ ವಿಶ್ವವಿದ್ಯಾಲಯದ ವ್ಯಾಸಂಗ ಪ್ರಸರಣ ಮತ್ತು ಪ್ರಕಟಣಾ ವಿಭಾಗದ ಕಾರ್ಯದರ್ಶಿಯಾಗಿ, ಪ್ರಸಾರಾಂಗದ ನಿರ್ದೇಶಕರಾಗಿ ಸೇವೆ ಸಲ್ಲಿಸಿದರು. ಭಾವಜೀವಿ, ಸಮನ್ವಯ ಕವಿ ಎಂದೇ ಅವರು ಖ್ಯಾತಿಗಳಿಸಿದ್ದಾರೆ.

ಇದನ್ನೂ ಓದಿ:ಖ್ಯಾತ ಸಂಗೀತ ನಿರ್ದೇಶಕ 69 ವರ್ಷದ ಬಪ್ಪಿ ಲಹರಿ ನಿಧನ

Advertisement

1949ರಲ್ಲಿ ಡಾ. ಚನ್ನವೀರ ಕಣವಿ ಮೊದಲ ಕವಲ ಸಂಕಲನ ಕಾವ್ಯಾಕ್ಷಿ ಬಿಡುಗಡೆಗೊಂಡಿತು. ಭಾವಜೀವಿ, ಆಕಾಶಬುಟ್ಟಿ, ಮಣ್ಣಿನ ಮೆರವಣಿಗೆ, ನೆಲಮುಗಿಲು, ಜೀವಧ್ವನಿ ಮುಂತಾದ ಕವನ ಸಂಕಲನಗಳನ್ನು ಅವರು ರಚಿಸಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಅನಕೃ ಪ್ರತಿಷ್ಠಾನ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಹಾಸನದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಹಂಪಿ ವಿಶ್ವವಿದ್ಯಾಲಯ ನಾಡೋಜ ಪ್ರಶಸ್ತಿ ನೀಡಿ ಗೌರವಿಸಿದೆ. ಕರ್ನಾಟಕ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿದೆ.

Koo App

’ಸಮನ್ವಯ ಕವಿ’, ಖ್ಯಾತ ಸಾಹಿತಿ ನಾಡೋಜ ಡಾ. ಚೆನ್ನವೀರ ಕಣವಿ ಅವರ ನಿಧನದ ಸುದ್ದಿ ದುಃಖ ತಂದಿದೆ. NEP2020 ಅನುಷ್ಠಾನದ ಸಂಬಂಧ ಭೇಟಿಯಾದಾಗ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ, ಸಾಹಿತ್ಯಾಭಿಮಾನಿಗಳು, ಹಿತೈಷಿಗಳು, ಕುಟುಂಬ ವರ್ಗಕ್ಕೆ ನೋವು ಭರಿಸುವ ಶಕ್ತಿ ದೊರಕಲೆಂದು ಪ್ರಾರ್ಥಿಸುವೆ. ಓಂ ಶಾಂತಿ.

Dr. Ashwathnarayan C. N. | ಡಾ. ಅಶ್ವಥ್ ನಾರಾಯಣ್ ಸಿ.ಎನ್. (@drashwathnarayan) 16 Feb 2022

Advertisement

Udayavani is now on Telegram. Click here to join our channel and stay updated with the latest news.

Next