Advertisement

ಕನ್ನಡದ ಹಿರಿಯ ವಿದ್ವಾಂಸ ಎಂ.ಎಚ್.ಕೃಷ್ಣಯ್ಯ ವಿಧಿವಶ

07:49 PM Aug 12, 2022 | Team Udayavani |

ಬೆಂಗಳೂರು:ಕನ್ನಡದ ಹಿರಿಯ ವಿದ್ವಾಂಸ, ಸಾಹಿತ್ಯ ಮತ್ತು ಕಲಾ ವಿಮರ್ಶಕರು, ಕಲಾ ಪೋಷಕ, ಕರ್ನಾಟಕ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಪ್ರೊ. ಎಂ.ಎಚ್. ಕೃಷ್ಣಯ್ಯ ಅವರು ಶುಕ್ರವಾರ ನಿಧನ ಹೊಂದಿದ್ದಾರೆ.

Advertisement

ಸಾಹಿತ್ಯ ಮತ್ತು ಕಲಾ ವಿಮರ್ಶೆ ಕ್ಷೇತ್ರದಲ್ಲಿ ಅತ್ಯಂತ ಶಿಸ್ತಿನ ಕಾರ್ಯನಿರ್ವಹಣೆಗೆ ಪ್ರೊ. ಎಂ.ಎಚ್. ಕೃಷ್ಣಯ್ಯ ಅವರು ಹೆಸರಾಗಿದ್ದರು. ಕನ್ನಡದ ಹಲವು ಕೃತಿಗಳನ್ನು ರಚಿಸಿದ್ದರು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕನ್ನಡದ ಸಾವಿರಾರು ಅಭ್ಯರ್ಥಿಗಳನ್ನು ಸಜ್ಜುಗೊಳಿಸಿದ್ದರು. ಕೋಲಾರ, ಮಂಗಳೂರು, ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಸರಕಾರಿ ಕಾಲೇಜುಗಳಲ್ಲಿ ಪ್ರಾಧ್ಯಾಪಕರಾಗಿ ನಿವೃತ್ತರಾಗಿದ್ದರು. ನಿವೃತ್ತಿಯ ನಂತರವೂ ಸಾಹಿತ್ಯ ಮತ್ತು ಕಲಾ ಸೇವೆಯಲ್ಲಿ ಪರಿಪೂರ್ಣವಾಗಿ ತೊಡಗಿಸಿಕೊಂಡಿದ್ದರು.

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಪ್ರೊ. ಎಂ.ಎಚ್. ಕೃಷ್ಣಯ್ಯನವರು ತಮಗೆ ಆತ್ಮೀಯರಾಗಿದ್ದು, ಸಾಹಿತ್ಯ ಚಟುವಟಿಕೆಗಳ ಕುರಿತು ಮಾರ್ಗದರ್ಶನವನ್ನು ನೀಡುತ್ತಿದ್ದರು. ಅವರ ಅಗಲಿಕೆಯಿಂದಾಗಿ ಕನ್ನಡ ನುಡಿ ಮತ್ತು ಕಲಾ ಜಗತ್ತಿನ ಬಹುಮುಖ್ಯ ಕೊಂಡಿ ಕಳಚಿದಂತಾಗಿದೆ ಎಂದಿದ್ದಾರೆ.

ಕೃಷ್ಣಯ್ಯ ಅವರ ಅಂತಿಮ ಸಂಸ್ಕಾರ ಗಾಯತ್ರಿ ನಗರದ ಹರಿಶ್ಚಂದ್ರ ಘಾಟ್ ನಲ್ಲಿ ಶನಿವಾರ ಬೆಳಗ್ಗೆ 11 ಗಂಟೆಗೆ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next