Advertisement
ಕಳೆದ ಒಂದು ವಾರ ಹಿಂದೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಪ್ರೊ.ವಸಂತ ಕುಷ್ಟಗಿ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದರು. ಅವರು ಕಡಿಮೆ ರಕ್ತದೊತ್ತಡದಿಂದ ಬಳಲುತ್ತಿದ್ದರು ಎಂದು ಮೂಲಗಳು ತಿಳಿಸಿವೆ.
Related Articles
Advertisement
ಪ್ರೊ.ವಸಂತ ಕುಷ್ಟಗಿ ಅವರು ದಾಸ ಸಾಹಿತ್ಯ ಕ್ಷೇತ್ರದಲ್ಲಿ ಮಾಡಿದ ಕೃಷಿ ಅಗಾಧವಾದುದು. ವಿದ್ವಾಂಸ, ವಿಮರ್ಶಕ, ಭಾಷಾಜ್ಞಾನಿ, ಹೋರಾಟಗಾರರಾಗಿಯೂ ಹೆಸರು ಮಾಡಿದ್ದರು.
ಹೈದರಾಬಾದ್‌ನ ಉಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಕನ್ನಡ ಎಂ.ಎ ಪದವಿ ಪಡೆದಿದ್ದ ಅವರು, 8 ಕವನ ಸಂಕಲನ, ಮೂವತ್ತಕ್ಕೂ ಹೆಚ್ಚು ಗದ್ಯ ಸಂಕಲನ, 16ಕ್ಕೂ ಹೆಚ್ಚುಸಂಪಾದನೆ ಪುಸ್ತಕಗಳು, 22ಕ್ಕೂ ಹೆಚ್ಚು ಸಂಪಾದಿಸಿದ ಗ್ರಂಥಗಳು ರಚಿಸಿ ಸಾಹಿತ್ಯ ಕೃಷಿಗೈದಿದ್ದರು.
ದಿವಂಗತ ಎನ್.ಧರ್ಮಸಿಂಗ್ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಬಂದಿತ್ತು. ಒಂದು ಬಾರಿ ಕಲಬುರ್ಗಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿಕೊಂಡಿದ್ದರು. 2019ರಲ್ಲಿ ಕಲಬುರಗಿಯಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿಕೊಳ್ಳಲು ಪ್ರೊ.ವಸಂತ ಕುಷ್ಟಗಿ ಅವರ ಹೆಸರು ಕೂಡ ಮುಂಚೂಣಿಗೆ ಬಂದಿತ್ತು.
ಇದನ್ನೂ ಓದಿ: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು: ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಹತ್ವದ ಆದೇಶ