ನವದೆಹಲಿ : ರಾಷ್ಟ್ರ ರಾಜಧಾನಿ ನವದೆಹಲಿಯ ರಾಜೀವ್ ಚೌಕ್ ಮೆಟ್ರೋ ನಿಲ್ದಾಣದಲ್ಲಿ ಮಹಿಳೆಯೊಬ್ಬರಿಗೆ ಕಿರುಕುಳ ನೀಡಿ, ಬೆದರಿಕೆಯೊಡ್ಡಿದ ಆರೋಪದಡಿ ಹಿರಿಯ ಮ್ಯಾನೇಜರ್ ಮತ್ತು ಎಂಬಿಎ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ.
ಮೇ 3 ರಂದು ಈ ಘಟನೆ ನಡೆದಿದ್ದು, ಆರೋಪಿಯನ್ನು ಜೆನ್‍ಪ್ಯಾಕ್ಟ್‍ನ ಹಿರಿಯ ವ್ಯವಸ್ಥಾಪಕ ಲವ್ ಬಗ್ಗಾ ಎಂದು ಗುರುತಿಸಲಾಗಿದೆ. ರಾಜೀವ್ ಚೌಕ್ ಮೆಟ್ರೋ ನಿಲ್ದಾಣದಲ್ಲಿ ತನಗೆ ಕಿರುಕುಳ ನೀಡುವುದರ ಜೊತೆಗೆ ಬೆದರಿಕೆ ಹಾಕಲಾಗಿದೆ ಎಂದು ಮಹಿಳೆ ಆರೋಪಿಸಿದ್ದು, ಈ ಕುರಿತಂತೆ ಟ್ವೀಟ್ ಕೂಡ ಮಾಡಿದ್ದರು.
ಮಹಿಳೆ ನೀಡಿದ ದೂರಿನ ಮೇಲೆ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಗಳ ಬಗ್ಗೆ ಮಾಹಿತಿ ಕಲೆಹಾಕಿ ಇಬ್ಬರನ್ನು ಬಂಧಿಸಿದ್ದಾರೆ.
ಪ್ರಮುಖ ಆರೋಪಿಯನ್ನು 38 ವರ್ಷದ ಲುವ್ ಬಗ್ಗಾ ಎಂದು ಗುರುತಿಸಿದ ಪೊಲೀಸರು ಆತನನ್ನು ದೆಹಲಿಯ ಪಾಂಡವ್ ನಗರದಲ್ಲಿ ಪತ್ತೆಹಚ್ಚಿ ಬಂಧಿಸಿದ್ದಾರೆ ಮತ್ತು ಪ್ರಕರಣದ ಎರಡನೇ ಆರೋಪಿಯಾಗಿರುವ ದೆಹಲಿ ವಿಶ್ವವಿದ್ಯಾನಿಲಯದಲ್ಲಿ ಎಂಬಿಎ ವಿದ್ಯಾರ್ಥಿಯಾಗಿರುವ 24 ವರ್ಷದ ಶಿವ ಓಂ ಗುಪ್ತಾ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ : ಸಿಎಂ ಬೊಮ್ಮಾಯಿಗೆ ಕೋವಿಡ್ ಸೋಂಕು: ದಿಲ್ಲಿ ಪ್ರವಾಸ ರದ್ದು