Advertisement

ಸ್ಯಾಂಡಲ್ ವುಡ್ ಹಿರಿಯ ನಟ ಅಶೋಕ್ ರಾವ್ ನಿಧನ

12:39 PM Feb 02, 2022 | Team Udayavani |

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡದ ಹಿರಿಯ ನಟ ಅಶೋಕ್ ರಾವ್ ನಿಧನರಾಗಿದ್ದಾರೆ. ಹಲವು ದಿನಗಳಿಂದ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ಅಶೋಕ್ ರಾವ್ ಅವರು ಮಂಗಳವಾರ ಮಧ್ಯರಾತ್ರಿ 12.30ಕ್ಕೆ ವಿದ್ಯಾರಣ್ಯಪುರದಲ್ಲಿರುವ ಮನೆಯಲ್ಲಿ ಕೊನೆಯುಸಿರೆಳೆದರು.

Advertisement

ಖಳ ನಟ, ಪೋಷಕ ಪಾತ್ರಗಳಲ್ಲಿ ಮಿಂಚಿದ್ದ ಅಶೋಕ್ ರಾವ್ ಅವರು ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.

ಡಾ. ರಾಜ್​ಕುಮಾರ್​ ನಟನೆಯ ‘ಪರಶುರಾಮ್​’ ಸಿನಿಮಾದಲ್ಲಿ ಖಳ ನಟನಾಗಿ ಅವರು ಗಮನ ಸೆಳೆದಿದ್ದರು. ಅಶೋಕ್​ ರಾವ್​ ಅವರ ಪ್ರತಿಭೆಯನ್ನು ಗಮನಿಸಿದ್ದ ರಾಜ್​ಕುಮಾರ್​ ಅವರೇ ಕರೆದು ‘ಪರಶುರಾಮ್ ​’ಸಿನಿಮಾದ ವಿಲನ್​ ಪಾತ್ರವನ್ನು ಅವರಿಗೆ ನೀಡಿದ್ದರು.

ಇದನ್ನೂ ಓದಿ:ಪ್ರಭಾಸ್- ಪೂಜಾ ಹೆಗ್ಡೆ ಅಭಿನಯದ ‘ರಾಧೆ ಶ್ಯಾಮ್’ ಬಿಡುಗಡೆ ದಿನಾಂಕ ಫಿಕ್ಸ್

ಅತಿ ಅಪರೂಪ, ಪರಿಣಯ, ಶತ್ರು, ಮುಗಿಲ ಚುಂಬನ, ಬಾಸ್, ಪೊಲೀಸ್ ಕಥೆ, ಹೂ, ಕೃಷ್ಣನ್ ಲವ್ ಸ್ಟೋರಿ, ಕುಣಿದು ಕುಣಿದು ಬಾರೆ, ಯುವ, ಮನಸಾರೆ, ಬೊಂಬಾಟ್, ಅರ್ಜುನ್, ಸಂಗಾತಿ,  ಪೊಲೀಸ್ ಕಥೆ, ಸಜನಿ, ಸೌಂದರ್ಯ, ಬೊಂಬುಗಳು ಸಾರ್ ಬೊಂಬುಗಳು, ಮತಾಡ್ ಮಾತಾಡ್ ಮಲ್ಲಿಗೆ, ಆಪರೇಷನ್ ಅಂಕುಶ, ತವರಿನ ಸಿರಿ, ತಿರುಪತಿ, ಸೈನೈಡ್, ಸಿರಿವಂತ, ರಿಷಿ, ಗಡಿಪಾರ್, ಇನ್ಸ್‌ಪೆಕ್ಟರ್ ಝಾನ್ಸಿ, ಆಟೋ ಶಂಕರ್, ಓಂ ಗಣೇಶ್, ಸೈನಿಕ, ಇಂದ್ರ ಧನುಷ್, ಹಬ್ಬ, ಓ ಪ್ರೇಮವೇ, ಸ್ನೇಹ, ಟುವ್ವಿ ಟುವ್ವಿ ಟುವ್ವಿ, ಜೋಡಿ ಹಕ್ಕಿ, ಅಶ್ವಮೇಧ ಮುಂತಾದ ಚಿತ್ರಗಳಲ್ಲಿ ಅಶೋಕ್ ರಾವ್ ನಟಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next