Advertisement

ಹಿರಿಯ ಅರ್ಥಧಾರಿ ಎಸ್. ಎಂ. ಹೆಗಡೆ ನಿಧನ

09:37 AM Apr 07, 2022 | Team Udayavani |

ಹೊನ್ನಾವರ: ತಮ್ಮ ಭಾವಪೂರ್ಣ ಅರ್ಥಗಾರಿಕೆಯಿಂದ ಯಕ್ಷಗಾನಪ್ರಿಯರ ಮನ ಗೆದ್ದಿದ್ದ ಹೊನ್ನಾವರದ ಎಸ್. ಎಂ. ಹೆಗಡೆ ಮುಡಾರೆ ಅಲ್ಪ ಕಾಲದ ಅಸೌಖ್ಯದಿಂದ ಬುಧವಾರ ( ಏ.6) ನಿಧನ ಹೊಂದಿದರು. ಅವರಿಗೆ 74 ವರ್ಷ ವಯಸ್ಸಾಗಿತ್ತು.

Advertisement

ಮೃತರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ. ಹವ್ಯಾಸಿ ವೇಷಧಾರಿ ಮತ್ತು ನಾಟಕದ ಕಲಾವಿದರಾಗಿ ಕಲಾಕ್ಷೇತ್ರಕ್ಕೆ ಸೇವೆ ಸಲ್ಲಿಸಿದ್ದರು. ಸಂಪ್ರದಾಯ ಬದ್ಧ ಭಜನೆ ಹಾಡುವುದರಲ್ಲಿ ಪ್ರಸಿದ್ಧರಾಗಿದ್ದರು.

ಇದನ್ನೂ ಓದಿ:ಪದವಿ ಸ್ವೀಕರಿಸುವವರಿಗೆ “ವಸ್ತ್ರಸಂಹಿತೆ’ ಕಡ್ಡಾಯ!

ಹೊಸಾಕುಳಿಯ ಉಮಾಮಹೇಶ್ವರ ಕಲಾರ್ಧಕ ಸಂಗದ ಕಾರ್ಯದರ್ಶಿಯಾಗಿ 42 ವರ್ಷಗಳಿಂದ ಅದನ್ನು ಮುನ್ನಡೆಸಿಕೊಂಡು ಬಂದಿದ್ದರು. ತಾಳಮದ್ದಲೆಯನ್ನು ಉಳಿಸಿ ಬೆಳೆಸುವಲ್ಲಿ ಎಂ.ಎಸ್.ಹೆಗಡೆ ವಿಶಿಷ್ಟ ಕೊಡುಗೆ ನೀಡಿದ್ದರು. ತಾಳಮದ್ದಲೆ ಕ್ಷೇತ್ರಕ್ಕೆ ಅವರು ಸಲ್ಲಿಸಿದ ಸೇವೆಗಾಗಿ ಉಡುಪಿಯ ಯಕ್ಷಗಾನ ಕಲಾರಂಗವು ಎಂ.ಎಸ್.ಹೆಗಡೆ ಅವರನ್ನು ಈ ಬಾರಿಯ ‘ಮಟ್ಟಿ ಮುರಲಿಧರ ರಾವ್’ ಪ್ರಶಸ್ತಿಗೆ ಆಯ್ಕೆ ಮಾಡಿತ್ತು. ಇವರ ನಿಧನಕ್ಕೆ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ಸೂಚಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next