Advertisement

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10:51 PM Jan 03, 2025 | Team Udayavani |

ಬೆಂಗಳೂರು: ಕೆಎಎಸ್‌ ಅಧಿಕಾರಿಗಳ ಸಂಘ ಮುಂದಿಟ್ಟಿರುವ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Advertisement

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘ ಹೊರತಂದಿರುವ ದಿನದರ್ಶಿಕೆ, ದಿನಚರಿ ಬಿಡುಗಡೆ ಮಾಡಿ ಅವರು ಮಾತನಾಡಿ, ಕೆಎಎಸ್‌ ಅಧಿಕಾರಿಗಳ ಸಂಖ್ಯೆ ಹೆಚ್ಚಿಸಲು ನಾವು ಸಿದ್ದರಿದ್ದೇವೆ. ಆದರೆ ಸಂಖ್ಯೆ ಮುಖ್ಯವಲ್ಲ. ನಿಮ್ಮ ಗುಣಾತ್ಮಕ ಕರ್ತವ್ಯ, ಸೇವೆ ಮುಖ್ಯ. ಕೆಎಎಸ್‌ ಅಧಿಕಾರಿಗಳ ಜೇಷ್ಠತಾ ಪಟ್ಟಿ ಸಿದ್ಧವಿದೆ. ಮುಂದಿನ 10 ದಿನಗಳ ಒಳಗಾಗಿ ಬಿಡುಗಡೆ ಆಗುತ್ತದೆ. ಕೆಎಎಸ್‌ ಅಧಿಕಾರಿಗಳ ಭಡ್ತಿ ಬೇಡಿಕೆಯನ್ನೂ ಪರಿಶೀಲಿಸಲಾಗುವುದು ಎಂದು ಸಿಎಂ ಭರವಸೆ ನೀಡಿದರು.

 

Advertisement

Udayavani is now on Telegram. Click here to join our channel and stay updated with the latest news.

Next