ಮುಂಬಯಿ: ಜಾಗತಿಕ ಷೇರು ಮಾರುಕಟ್ಟೆಯ ನೀರಸ ವಹಿವಾಟಿನ ಪರಿಣಾಮ ಮಂಗಳವಾರ (ಏಪ್ರಿಲ್ 12) ಮುಂಬಯಿ ಷೇರುಪೇಟೆಯ ಸೆನ್ಸೆಕ್ಸ್ 388ಕ್ಕೂ ಅಧಿಕ ಅಂಕಗಳಷ್ಟು ಕುಸಿತದೊಂದಿಗೆ ದಿನಾಂತ್ಯದ ವಹಿವಾಟು ಅಂತ್ಯಗೊಂಡಿದೆ.
ಇದನ್ನೂ ಓದಿ:WTO ಒಪ್ಪಿದ್ರೆ ಭಾರತ ಜಗತ್ತಿಗೆ ಆಹಾರ ದಾಸ್ತಾನು ಸರಬರಾಜು ಮಾಡಲು ಸಿದ್ಧ:ಪ್ರಧಾನಿ ಮೋದಿ ಅಭಯ
ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ 388.20 ಅಂಕ ಇಳಿಕೆಯಾಗಿದ್ದು, 58,586.37 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 144.65 ಅಂಕ ಕುಸಿತದೊಂದಿಗೆ 17,530.30 ಅಂಕಗಳಲ್ಲಿ ವಹಿವಾಟು ಮುಕ್ತಾಯಗೊಂಡಿದೆ.
ಸೆನ್ಸೆಕ್ಸ್, ನಿಫ್ಟಿ ಕುಸಿತದ ಪರಿಣಾಮ ಟಾಟಾ ಸ್ಟೀಲ್, ವಿಪ್ರೋ, ಟೆಕ್ ಮಹೀಂದ್ರ, ಭಾರ್ತಿ ಏರ್ ಟೆಲ್, ರಿಲಯನ್ಸ್ ಇಂಡಸ್ಟ್ರೀಸ್, ಎಲ್ ಆ್ಯಂಡ್ ಟಿ, ಬಜಾಜ್ ಫಿನ್ ಸರ್ವ್ ಷೇರುಗಳು ನಷ್ಟ ಕಂಡಿದೆ. ಮತ್ತೊಂದೆಡೆ ಆ್ಯಕ್ಸಿಸ್ ಬ್ಯಾಂಕ್, ಕೋಟಕ್ ಮಹೀಂದ್ರ ಬ್ಯಾಂಕ್, ಪವರ್ ಗ್ರಿಡ್, ಮಾರುತಿ ಸುಜುಕಿ ಮತ್ತು ಐಸಿಐಸಿಐ ಬ್ಯಾಂಕ್ ಷೇರುಗಳು ಲಾಭಗಳಿಸಿದೆ.
ಸೋಮವಾರ ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 482.61 ಅಂಕ ಕುಸಿತಗೊಂಡಿದ್ದು, 58,954.57 ಅಂಕಗಳಲ್ಲಿ ವಹಿವಾಟು ಕೊನೆಗೊಂಡಿತ್ತು. ಅದೇ ರೀತಿ ಎನ್ ಎಸ್ ಇ ನಿಫ್ಟಿ 109.40 ಅಂಕ ಇಳಿಕೆಯಾಗಿದ್ದು, 17,674.95 ಅಂಕಗಳಲ್ಲಿ ವಹಿವಾಟು ಅಂತ್ಯಗೊಂಡಿತ್ತು.