Advertisement

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 207 ಅಂಕ ಕುಸಿತ, 18,250ಕ್ಕಿಂತ ಕೆಳಕ್ಕೆ ಕುಸಿದ ನಿಫ್ಟಿ

05:37 PM Oct 27, 2021 | Team Udayavani |

ಮುಂಬಯಿ: ಜಾಗತಿಕ ಷೇರು ಮಾರುಕಟ್ಟೆಯಲ್ಲಿನ ಅನಿಶ್ಚಿತತೆಯ ವಹಿವಾಟಿನ ಪರಿಣಾಮ ಬುಧವಾರ (ಅಕ್ಟೋಬರ್ 27) ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 207 ಅಂಕಗಳಷ್ಟು ಕುಸಿತದೊಂದಿಗೆ ದಿನಾಂತ್ಯದ ವಹಿವಾಟು ಅಂತ್ಯಗೊಂಡಿದೆ.

Advertisement

ಇದನ್ನೂ ಓದಿ:ಆರ್ಯನ್‌ ಖಾನ್‌ ಜಾಮೀನು ಅರ್ಜಿ ವಿಚಾರಣೆ ಇಂದೂ ಮುಂದೂಡಿಕೆ

ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 206.93 ಅಂಕ ಕುಸಿತ ಕಂಡಿದ್ದು, 61,143.33 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 57.45 ಅಂಕ ಇಳಿಕೆಯಾಗಿದ್ದು, 18,210.95 ಅಂಕಗಳ ಗಡಿಗೆ ತಲುಪಿದೆ.

ಸೆನ್ಸೆಕ್ಸ್, ನಿಫ್ಟಿ ಇಳಿಕೆಯಿಂದಾಗಿ ಆ್ಯಕ್ಸಿಸ್ ಬ್ಯಾಂಕ್, ಬಜಾಜ್ ಫೈನಾನ್ಸ್, ಬಜಾಜ್ ಫಿನ್ ಸರ್ವ್, ಇಂಡಸ್ ಇಂಡ್ ಬ್ಯಾಂಕ್, ಎಚ್ ಯುಎಲ್ ಮತ್ತು ಟಾಟಾ ಸ್ಟೀಲ್ ಷೇರುಗಳು ನಷ್ಟ ಕಂಡಿದೆ. ಮತ್ತೊಂದೆಡೆ ಏಷ್ಯನ್ ಪೇಂಟ್ಸ್, ಸನ್ ಫಾರ್ಮಾ, ಇನ್ಫೋಸಿಸ್, ಎಸ್ ಬಿಐ ಮತ್ತು ಆಲ್ಟ್ರಾ ಟೆಕ್ ಸಿಮೆಂಟ್ ಷೇರುಗಳು ಲಾಭಗಳಿಸಿದೆ.

ಬ್ಯಾಂಕಿಂಗ್, ಮೆಟಲ್ ಮತ್ತು ಎನರ್ಜಿ ಸೆಕ್ಟರ್ ಗಳ ಷೇರುಗಳು ಷೇರುಪೇಟೆಯ ವಹಿವಾಟಿನ ಕೊನೆಯಲ್ಲಿ ಬಹಳಷ್ಟು ಬೇಡಿಕೆ ಕುಸಿದ ಪರಿಣಾಮ ಷೇರುಗಳ ಮೌಲ್ಯ ಇಳಿಕೆಯಾಗಲು ಕಾರಣವಾಗಿರುವುದಾಗಿ ಮಾರುಕಟ್ಟೆ ವಿಶ್ಲೇಷಕರು ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next