Advertisement

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 291 ಅಂಕ ಕುಸಿತ, 15,100ರ ಗಡಿ ತಲುಪಿದ ನಿಫ್ಟಿ

05:14 PM May 19, 2021 | |

ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯ ನೆಗೆಟಿವ್ ವಹಿವಾಟಿನ ಪರಿಣಾಮ ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 291 ಅಂಕ ಇಳಿಕೆಯಾಗಿದ್ದು, ಎಚ್ ಡಿಎಫ್ ಸಿ, ಐಸಿಐಸಿಐ ಬ್ಯಾಂಕ್ ಷೇರುಗಳು ನಷ್ಟ ಅನುಭವಿಸಿದೆ.

Advertisement

ಇದನ್ನೂ ಓದಿ:ಗೋವಾ ಪ್ರವೇಶಕ್ಕೆ ಕೋವಿಡ್ ನೆಗೆಟಿವ್ ಕಡ್ಡಾಯ ತೆರವು ಅಸಾಧ್ಯ: ಹೈಕೋರ್ಟ್ ಆಫ್ ಬಾಂಬೆ

ಬುಧವಾರ(ಮೇ 19) ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 290.69 ಅಂಕ ಕುಸಿತ ಕಂಡಿದ್ದು, 49,902.64 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಳಿಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 77.95 ಅಂಕ ಇಳಿಕೆಯಾಗಿದ್ದು, 15,030.15ರ ಗಡಿ ತಲುಪಿದೆ.

ಸೆನ್ಸೆಕ್ಸ್ ಇಳಿಕೆಯಿಂದ ಬಜಾಜ್ ಫಿನ್ ಸರ್ವ್, ಎಚ್ ಡಿಎಫ್ ಸಿ, ಮಹೀಂದ್ರಾ ಆ್ಯಂಡ್ ಮಹೀಂದ್ರ, ಭಾರ್ತಿ ಏರ್ ಟೆಲ್, ಆಲ್ಟ್ರಾ ಟೆಕ್ ಸಿಮೆಂಟ್ ಮತ್ತು ಕೋಟಕ್ ಬ್ಯಾಂಕ್ ಷೇರುಗಳು ನಷ್ಟ ಅನುಭವಿಸಿದೆ.

ಮತ್ತೊಂದೆಡೆ ಸನ್ ಫಾರ್ಮಾ, ನೆಸ್ಲೆ ಇಂಡಿಯಾ, ಟೆಕ್ ಮಹೀಂದ್ರಾ, ಬಜಾಜ್ ಆಟೋ ಮತ್ತು ಆ್ಯಕ್ಸಿಸ್ ಬ್ಯಾಂಕ್ ಷೇರುಗಳು ಲಾಭಗಳಿಸಿದೆ. ಶಾಂಘೈ ಮತ್ತು ಟೋಕಿಯೋ ಷೇರುಮಾರುಕಟ್ಟೆಯಲ್ಲಿಯೂ ನೆಗೆಟಿವ್ ಟ್ರೆಂಡ್ ಕಂಡುಬಂದಿರುವುದಾಗಿ ವರದಿ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next