ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್, ಇನ್ಫೋಸಿಸ್ ಮತ್ತು ಎಚ್ ಡಿಎಫ್ ಸಿಯ ಷೇರುಗಳು ತೀವ್ರ ಮಾರಾಟದ ಒತ್ತಡಕ್ಕೆ ಸಾಕ್ಷಿಯಾದ ಪರಿಣಾಮ ಗುರುವಾರ (ಫೆ.04, 2021) ಬಾಂಬೆ ಷೇರುಪೇಟೆ ಆರಂಭಿಕ ವಹಿವಾಟಿನಲ್ಲಿ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ 140 ಅಂಕಗಳಷ್ಟು ಇಳಿಕೆಯಾಗಿದೆ.
ಇದನ್ನೂ ಓದಿ:ಪಾಂಗಾಳ: ಮಗುಚಿ ಬಿದ್ದ ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿ, ಸಿಲಿಂಡರ್ ಗಳು ಚೆಲ್ಲಾಪಿಲ್ಲಿ
ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ 140.79 ಪಾಯಿಂಟ್ಸ್ ಗಳ ಕುಸಿತ ಕಂಡಿದ್ದು, 50,114.96 ಅಂಕಗಳ ವಹಿವಾಟು ಆರಂಭಿಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 31.30 ಅಂಕಗಳಷ್ಟು ಇಳಿಕೆಯಾಗಿದ್ದು, 14,758.65 ಅಂಕಗಳ ಗಡಿಯಲ್ಲಿದೆ.
ಆರಂಭಿಕ ವಹಿವಾಟಿನಲ್ಲಿ ಷೇರುಪೇಟೆ ಸೂಚ್ಯಂಕ ಕುಸಿದ ಪರಿಣಾಮ ಇಂಡಸ್ ಇಂಡ್ ಬ್ಯಾಂಕ್ ಷೇರು ಪ್ರಮುಖವಾಗಿ ನಷ್ಟ ಅನುಭವಿಸಿದ್ದು, ಆ್ಯಕ್ಸಿಸ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಎಚ್ ಡಿಎಫ್ ಸಿ ಬ್ಯಾಂಕ್, ಎಚ್ ಡಿಎಫ್ ಸಿ, ಏಷ್ಯನ್ ಪೈಂಟ್ಸ್, ಟೆಕ್ ಮಹೀಂದ್ರಾ, ಎಲ್ ಆ್ಯಂಡ್ ಟಿ ಮತ್ತು ಎಚ್ ಸಿಎಲ್ ಟೆಕ್ ಷೇರುಗಳು ಶೇ.2.90ರಷ್ಟು ನಷ್ಟ ಅನುಭವಿಸಿದೆ.
ಏತನ್ಮಧ್ಯೆ ಒಎನ್ ಜಿಸಿ, ಮಹೀಂದ್ರ ಆ್ಯಂಡ್ ಮಹೀಂದ್ರಾ, ಬಜಾಜ್ ಆಟೋ, ಎನ್ ಟಿಪಿಸಿ, ಮಾರುತಿ, ಐಟಿಸಿ ಮತ್ತು ಬಜಾಜ್ ಫೈನಾನ್ಸ್ ಷೇರುಗಳು ಲಾಭಗಳಿಸಿವೆ. ಬುಧವಾರ ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ 458.03 ಅಂಕಗಳಷ್ಟು ಏರಿಕೆಯೊಂದಿಗೆ 50,255.75 ಅಂಕಗಳೊಂದಿಗೆ ದಿನದ ವಹಿವಾಟು ಅಂತ್ಯಗೊಳಿಸಿತ್ತು.