ಮುಂಬಯಿ : ಅಮೆರಿಕದ ಫೆಡರಲ್ ರಿಸರ್ವ್ ಬ್ಯಾಂಕ್ ಸಭೆಯ ಫಲಿತಾಂಶವನ್ನು ಎದುರು ನೋಡುತ್ತಿರುವ ಹೂಡಿಕೆದಾರು ಮತ್ತು ವಹಿವಾಟುದಾರರು ಎಚ್ಚರಿಕೆ ನಡೆ ತೋರುತ್ತಿರುವ ಕಾರಣ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಬುಧವಾರದ ವಹಿವಾಟನ್ನು 66 ಅಂಕಗಳ ಅಲ್ಪ ಏರಿಕೆಯೊಂದಿಗೆ 39,112.74 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. ಆಟೋ, ಬ್ಯಾಂಕಿಂಗ್ ರಂಗದ ಶೇರುಗಳು ಕುಸಿತಕ್ಕೆ ಗುರಿಯಾದವು.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ದಿನದ ವಹಿವಾಟನ್ನು 11,691.45 ಅಂಕಗಳ ಮಟ್ಟದಲ್ಲಿ ಅಲ್ಪ ಗಳಿಕೆಗೆ ಸೀಮಿತವಾಗಿ ಕೊನೆಗೊಳಿಸಿತು.
ಇಂದಿನ ಟಾಪ್ ಗೇನರ್‌ಗಳ ಪೈಕಿ ಟಾಟಾ ಸ್ಟೀಲ್, ಕೋಟಕ್ ಬ್ಯಾಂಕ್, ಎನ್‌ಟಿಪಿಸಿ, ಅವಳಿ ಎಚ್ ಡಿ ಎಫ್ ಸಿ, ಪವರ್ ಗ್ರಿಡ್, ಒಎನ್‌ಜಿಸಿ ಶೇರುಗಳು ಶೇ. 4.60 ಏರಿಕೆಯನ್ನು ಕಂಡವು.
ಅದೇ ವೇಳೆ ಎಸ್ ಬ್ಯಾಂಕ್, ಟಾಟಾ ಮೋಟರ್, ಹೀರೋ ಮೋಟೋ ಕಾರ್ಪ್, ಇಂಡಸ್ ಇಂಡ್ ಬ್ಯಾಂಕ್, ಮಹೀಂದ್ರ, ಭಾರ್ತಿ ಏರ್ ಟೆಲ್ ಮತ್ತು ಬಜಾಜ್ ಆಟೋ ಶೇರುಗಳು ಶೇ.5.54 ಕುಸಿತವನ್ನು ಕಂಡವು.
ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,687 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 700 ಶೇರುಗಳು ಮುನ್ನಡೆ ಸಾಧಿಸಿದವು; 1,867 ಶೇರುಗಳು ಹಿನ್ನಡೆಗೆ ಗುರಿಯಾದವು; 120 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ.