ಮುಂಬಯಿ: ವಿದೇಶಿ ಬಂಡವಾಳದ ನಿರಂತರ ಹೊರಹರಿವು ಮತ್ತು ಏಷ್ಯನ್ ಮಾರುಕಟ್ಟೆಯ ಮಿಶ್ರ ವಹಿವಾಟಿನ ಪರಿಣಾಮ ಸೋಮವಾರ (ಫೆ.07) ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 225 ಅಂಕಗಳಷ್ಟು ಇಳಿಕೆಯೊಂದಿಗೆ ದಿನದ ವಹಿವಾಟು ಮುಂದುವರಿದಿದೆ.
ಇದನ್ನೂ ಓದಿ:ಸಂಭಾವನೆ ಪಡೆಯದೇ ಕನ್ನಡದಲ್ಲಿ ಎರಡು ಹಾಡು ಹಾಡಿದ್ದರು ಲತಾ ದೀದಿ…
ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 225.04 ಅಂಕ ಕುಸಿದಿದ್ದು, 58,419.78 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 69.55 ಅಂಕ ಇಳಿಕೆಯಾಗಿದ್ದು, 17,446.75 ಅಂಕಗಳಲ್ಲಿ ವಹಿವಾಟು ನಡೆಸಿದೆ.
ಬಜಾಜ್ ಫಿನ್ ಸರ್ವ್, ಎಚ್ ಡಿಎಫ್ ಸಿ ಬ್ಯಾಂಕ್, ಇನ್ಫೋಸಿಸ್, ಮಹೀಂದ್ರ ಆ್ಯಂಡ್ ಮಹೀಂದ್ರ, ಏಷ್ಯನ್ ಪೇಂಟ್ಸ್, ಭಾರ್ತಿ ಏರ್ ಟೆಲ್, ಡಾ.ರೆಡ್ಡೀಸ್ ಮಾರುತಿ ಮತ್ತು ಎಚ್ ಡಿಎಫ್ ಸಿ ಷೇರುಗಳು ನಷ್ಟ ಕಂಡಿದೆ. ಮತ್ತೊಂದೆಡೆ ಟಾಟಾ ಸ್ಟೀಲ್, ಪವರ್ ಗ್ರಿಡ್, ಎಸ್ ಬಿಐ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳು ಲಾಭಗಳಿಸಿದೆ.
ಶುಕ್ರವಾರ ಮುಂಬಯಿ ಷೇರುಪೇಟೆಯ ಸೆನ್ಸೆಕ್ಸ್ 143.20 ಅಂಕಗಳಷ್ಟು ಇಳಿಕೆಯಾಗಿದ್ದು, 58,644.82 ಅಂಕಗಳಲ್ಲಿ ವಹಿವಾಟು ಅಂತ್ಯಗೊಂಡಿತ್ತು. ಅದೇ ರೀತಿ ಎನ್ ಎಸ್ ಇ ನಿಫ್ಟಿ 43.90 ಅಂಕ ಕುಸಿದಿದ್ದು, 17,516.30 ಅಂಕಗಳಲ್ಲಿ ವಹಿವಾಟು ಕೊನೆಗೊಂಡಿತ್ತು.