ಮುಂಬಯಿ : ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಗುರುವಾರ ನಿರಂತರ ಮೂರನೇ ದಿನ ಮುನ್ನಡೆಯನ್ನು ದಾಖಲಿಸಿತಾದರೂ ಅಲ್ಪ ಗಳಿಕೆಗೆ ತೃಪ್ತಿ ಪಟ್ಟುಕೊಂಡಿತು.
ಸೆನ್ಸೆಕ್ಸ್ 52.79 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 36,374.08 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನು ಕೊನೆಗೊಳಿಸಿತು. ಇದೇ ರೀತಿ ರಾಷ್ಟ್ರೀಯ ಶೇರು ಪೇಟೆಯ ನಿಫ್ಟಿ ಸೂಚ್ಯಂಕ 14.90 ಅಂಕಗಳ ಏರಿಕೆಯನ್ನು ದಾಖಲಿಸಿ ದಿನದ ವಹಿವಾಟನ್ನು 10,905.20 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಮುಂಬಯಿ ಶೇರು ಪೇಟೆಯಲ್ಲಿ ಇಂದು ಒಟ್ಟು 2,744 ಕಂಪೆನಿಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,043 ಕಂಪೆನಿಗಳು ಮುನ್ನಡೆ ಸಾಧಿಸಿದವು; 1,521 ಕಂಪೆನಿಗಳು ಹಿನ್ನಡೆಗೆ ಗುರಿಯಾದವು; 180 ಕಂಪೆನಿಗಳ ಶೇರು ಧಾರಣೆಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬರಲಿಲ್ಲ.
ಇಂದಿನ ವಹಿವಾಟಿನಲ್ಲಿ ಎಕ್ಸಿಸ್ ಬ್ಯಾಂಕ್, ಎಚ್‌ಸಿಎಲ್ ಟೆಕ್, ಮಹೀಂದ್ರ, ಟಿಸಿಎಸ್, ಎಚ್ ಡಿ ಎಫ್ ಸಿ, ಕೋಟಕ್ ಬ್ಯಾಂಕ್, ಪವರ್ ಗ್ರಿಡ್, ಹೀರೊ ಮೋಟೋ ಕಾರ್ಪ್, ವೇದಾಂತ ಶೇರುಗಳು ಶೇ.1.91ರ ಏರಿಕೆಯನ್ನು ದಾಖಲಿಸಿ ಟಾಪ್ ಗೇನರ್ ಎನಿಸಿಕೊಂಡವು.