ನವದೆಹಲಿ: ಜಾಗತಿಕ ಷೇರು ಮಾರುಕಟ್ಟೆಯ ಭರ್ಜರಿ ವಹಿವಾಟಿನ ಪರಿಣಾಮ ಸೋಮವಾರ (ಜುಲೈ 18) ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 700ಕ್ಕೂ ಅಧಿಕ ಅಂಕಗಳಷ್ಟು ಏರಿಕೆಯಯೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ.
ಇದನ್ನೂ ಓದಿ:ದುಬಾರಿ ದುನಿಯಾ: ಬಿಜೆಪಿ ಸರ್ಕಾರದಿಂದ ‘ತೆರಿಗೆ ದಾಳಿ’ ಎಂದ ಕಾಂಗ್ರೆಸ್
ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 760 ಅಂಕಗಳಷ್ಟು ಏರಿಕೆಯಾಗುವ ಮೂಲಕ 54,521ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 229 ಅಂಕ ಏರಿಕೆಯೊಂದಿಗೆ 16,278 ಅಂಕಗಳಲ್ಲಿ ವಹಿವಾಟು ಮುಕ್ತಾಯಗೊಂಡಿದೆ.
ಸೆನ್ಸೆಕ್ಸ್ ಏರಿಕೆಯಿಂದ ಐಟಿ, ಪಿಎಸ್ ಯು ಬ್ಯಾಂಕ್, ಮೆಟಲ್ ಮತ್ತು ಖಾಸಗಿ ಬ್ಯಾಂಕ್ ಗಳ ಷೇರುಗಳು ಶೇ.3.17ರಷ್ಟು ಹೆಚ್ಛಳ ಕಂಡಿದೆ. ಇಂಡಸ್ ಇಂಡ್ ಬ್ಯಾಂಕ್, ಇನ್ಫೋಸಿಸ್. ಟೆಕ್ ಮಹೀಂದ್ರ, ಬಜಾಜ್ ಫಿನ್ ಸರ್ವ್, ಆ್ಯಕ್ಸಿಸ್ ಬ್ಯಾಂಕ್ ಷೇರುಗಳು ಲಾಭಗಳಿಸಿದೆ.
ಮತ್ತೊಂದೆಡೆ ಡಾ.ರೆಡ್ಡಿ, ಎಚ್ ಡಿಎಫ್ ಸಿ ಬ್ಯಾಂಕ್, ಮಹೀಂದ್ರ ಆ್ಯಂಡ್ ಮಹೀಂದ್ರ, ನೆಸ್ಲೆ ಇಂಡಿಯಾ ಮತ್ತು ಮಾರುತಿ ಷೇರುಗಳ ಬೆಲೆ ಕುಸಿತ ಕಂಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.