ಮುಂಬಯಿ : ಜಾಗತಿಕ ಮತ್ತು ದೇಶೀಯ ಮಾರುಕಟ್ಟೆಗಳಲ್ಲಿ ಧನಾತ್ಮಕತೆ ತೋರಿಬಂದ ಕಾರಣ ಮುಂಬಯಿ ಶೇರುಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಸೋಮವಾರದ ವಹಿವಾಟನ್ನು 169 ಅಂಕಗಳ ಏರಿಕೆಯೊಂದಿಗೆ 39,784.52 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 52.05 ಅಂಕಗಳ ಏರಿಕೆಯನ್ನು ದಾಖಲಿಸಿ ದಿನದ ವಹಿವಾಟನ್ನು 11,922.70 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. ಇದರೊಂದಿಗೆ ನಿಫ್ಟಿ ಮತ್ತೆ 11,900ರ ಮಟ್ಟವನ್ನು ಗಳಿಸಿದಂತಾಯಿತು.
ಇಂದಿನ ಟಾಪ್ ಗೇನರ್‌ಗಳಾಗಿ ಮೂಡಿ ಬಂದ ಟಿಸಿಎಸ್, ಭಾರ್ತಿ ಏರ್‌ಟೆಲ್, ಇನ್‌ಫೋಸಿಸ್, ಎಕ್ಸಿಸ್ ಬ್ಯಾಂಕ್, ಎಲ್ ಆ್ಯಂಡ್ ಟಿ, ಐಟಿಸಿ, ಪವರ್ ಗ್ರಿಡ್, ಎಚ್‌ಸಿಎಲ್ ಟೆಕ್ ಮತ್ತು ಟಾಟಾ ಸ್ಟೀಲ್ ಶೇರುಗಳು ಶೇ.2.39ರ ಏರಿಕೆಯನ್ನು ದಾಖಲಿಸಿದವು.
ಡಾಲರ್ ಎದುರು ರೂಪಾಯಿ ಇಂದು 9 ಪೈಸೆಗಳ ಕುಸಿತವನ್ನು ಕಂಡು 69.55 ರೂ. ಮಟ್ಟಕ್ಕೆ ಇಳಿಯಿತು. ಬ್ರೆಂಟ್ ಕಚ್ಚಾ ತೈಲ ಅಲ್ಪ ಇಳಿಕೆಯನ್ನು ಕಂಡು ಬ್ಯಾರಲ್ ಗೆ 63.23 ಡಾಲರ್ ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,783 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 985 ಶೇರುಗಳು ಮುನ್ನಡೆ ಸಾಧಿಸಿದವು; 1,623 ಶೇರುಗಳು ಹಿನ್ನಡೆಗೆ ಗುರಿಯಾದವು; 175 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ.