ಮುಂಬಯಿ: ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ನಡುವೆಯೂ ಶುಕ್ರವಾರ(ಮೇ 07) ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ ಮತ್ತು ನಿಫ್ಟಿ ಏರಿಕೆಯಾಗುವ ಮೂಲಕ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿದೆ.
ಇದನ್ನೂ ಓದಿ:ಮಾಜಿ ಭೂಗತ ಪಾತಕಿ ಛೋಟಾ ರಾಜನ್ ಮೃತ ಪಟ್ಟಿಲ್ಲ : ಏಮ್ಸ್
ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ 257 ಅಂಕಗಳಷ್ಟು ಏರಿಕೆಯಾಗಿ 49,206.47 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ. ಅದೇ ರೀತಿ ನಿಫ್ಟಿ 98.35ಅಂಕಗಳ ಏರಿಕೆಯೊಂದಿಗೆ 14,823.15ಅಂಕಗಳೊಂದಿಗೆ ವಹಿವಾಟು ಮುಕ್ತಾಯಗೊಳಿಸಿದೆ.
ಜಾಗತಿಕ ಷೇರುಮಾರುಕಟ್ಟೆಯ ಧನಾತ್ಮಕ ವಹಿವಾಟಿನ ಪರಿಣಾಮ ಭಾರತೀಯ ಷೇರುಪೇಟೆ ಮೇಲೆ ಬೀರಿದ್ದು, ಎಚ್ ಡಿಎಫ್ ಸಿ, ಐಟಿಟಿ, ಎಚ್ ಡಿಎಫ್ ಸಿ ಬ್ಯಾಂಕ್ ಮತ್ತು ಭಾರ್ತಿ ಏರ್ ಟೆಲ್ ಷೇರುಗಳು ಲಾಭ ಗಳಿಸಿವೆ.
ಮತ್ತೊಂದೆಡೆ ಬಜಾಜ್ ಆಟೋ, ಬಜಾಜ್ ಫೈನಾನ್ಸ್, ಇನ್ಫೋಸಿಸ್ ಮತ್ತು ಕೋಟಕ್ ಬ್ಯಾಂಕ್ ಷೇರುಗಳು ನಷ್ಟ ಅನುಭವಿಸಿದೆ. ದೇಶೀ ಈಕ್ವಿಟಿಗಳು ಹೆಚ್ಚಿನ ಲಾಭಗಳಿಸಿದೆ.