ಮುಂಬಯಿ: ಜಾಗತಿಕ ಷೇರು ಮಾರುಕಟ್ಟೆಯ ಭರ್ಜರಿ ವಹಿವಾಟಿನ ಪರಿಣಾಮ ಮಂಗಳವಾರ (ಜೂನ್ 21) ಬಾಂಬೆ ಷೇರುಪೇಟೆಯ ಸೆನ್ಸೆಕ್ಸ್ 900ಕ್ಕೂ ಅಧಿಕ ಅಂಕಗಳಷ್ಟು ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ.
ಇದನ್ನೂ ಓದಿ:ರಾಷ್ಟ್ರಪತಿ ಚುನಾವಣೆ: ಯಶವಂತ್ ಸಿನ್ಹಾ ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಆಯ್ಕೆ
ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 934 ಅಂಕಗಳಷ್ಟು ಏರಿಕೆಯೊಂದಿಗೆ 52,532 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಅಂತ್ಯಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 289 ಅಂಕಗಳಷ್ಟು ಏರಿಕೆಯೊಂದಿಗೆ 15,639 ಅಂಕಗಳಲ್ಲಿ ವಹಿವಾಟು ಮುಕ್ತಾಯಗೊಂಡಿದೆ.
ಸೆನ್ಸೆಕ್ಸ್ ಏರಿಕೆಯಿಂದ ಟೈಟಾನ್, ಎಸ್ ಬಿಐ, ಟಿಸಿಎಸ್, ಎಚ್ ಸಿಎಲ್ ಟೆಕ್, ಡಾ.ರೆಡ್ಡೀಸ್ ಮತ್ತು ಟಾಟಾ ಸ್ಟೀಲ್ ಷೇರುಗಳು ಶೇ.5.92ರಷ್ಟು ಲಾಭ ಗಳಿಸಿದೆ. ಮತ್ತೊಂದೆಡೆ ನೆಸ್ಲೆ ಷೇರು ಮಾತ್ರ ನಷ್ಟ ಕಂಡಿದೆ.
ಕಳೆದ ವಾರ ಅಮೆರಿಕದಲ್ಲಿ ಆರ್ಥಿಕ ಹಿಂಜರಿಕೆ ಭೀತಿಯಿಂದಾಗಿ ಫೆಡರಲ್ ರಿಸರ್ವ್ ಬ್ಯಾಂಕ್ ಬಡ್ಡಿದರವನ್ನು ಭಾರೀ ಪ್ರಮಾಣದಲ್ಲಿ ಏರಿಕೆ ಮಾಡಿದ ಪರಿಣಾಮ ಬಾಂಬೆ ಷೇರುಪೇಟೆಯ ಸೆನ್ಸೆಕ್ಸ್ ದೊಡ್ಡ ಪ್ರಮಾಣದಲ್ಲಿ ನಷ್ಟ ಕಂಡಿತ್ತು.