ಮುಂಬಯಿ : ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಬುಧವಾರದ ಆರಂಭಿಕ ವಹಿವಾಟಿನಲ್ಲಿ 200 ಅಂಕಗಳ ಜಿಗಿತವನ್ನು ಸಾಧಿಸಿತು.
ಅಂತೆಯೇ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 11,500 ಅಂಕಗಳ ಮಟ್ಟವನ್ನು ಪುನರ್ ಸಂಪಾದಿಸಿತು.
ಜಾಗತಿಕ ಶೇರು ಪೇಟೆಗಳಲ್ಲಿನ ಧನಾತ್ಮಕತೆ, ವಿದೇಶಿ ಬಂಡವಾಳದ ಒಳಹರಿವಿನ ಹೆಚ್ಚಳ ಇವೇ ಮೊದಲಾದ ಕಾರಣಗಳಿಂದಾಗಿ ಮುಂಬಯಿ ಶೇರು ಪೇಟೆಯಲ್ಲಿ ತೇಜಿ ಕಂಡು ಬರುತ್ತಿದೆ.
ಬೆಳಗ್ಗೆ 11.30ರ ಸುಮಾರಿಗೆ ಸೆನ್ಸೆಕ್ಸ್ 156.22 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 38,389.63 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 40.00 ಅಂಕಗಳ ಏರಿಕೆಯೊಂದಿಗೆ 11,523.30 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿತ್ತು.
ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ ಎಸ್ ಬ್ಯಾಂಕ್, ರಿಲಯನ್ಸ್, ಇಂಡಸ್ ಇಂಡ್ ಬ್ಯಾಂಕ್, ಎಸ್‌ಬಿಐ, ಬಜಾಜ್ ಫಿನಾನ್ಸ್ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು.
ಡಾಲರ್ ಎದುರು ರೂಪಾಯಿ ಇಂದಿನ ಆರಂಭಿಕ ವಹಿವಾಟಿನಲ್ಲಿ 12 ಪೈಸೆಗಳ ಕುಸಿತ ಕಂಡು 68.98 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.