ಮುಂಬಯಿ : ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ ಅಲ್ಪ ಮುನ್ನಡೆ ಗಳಿಸಿತು.
ಬೆಳಗ್ಗೆ 10.40ರ ಹೊತ್ತಿಗೆ ಸೆನ್ಸೆಕ್ಸ್ 41.15 ಅಂಕಗಳ ನಷ್ಟದೊಂದಿಗೆ 37,049.67 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 20.50 ಅಂಕಗಳ ನಷ್ಟದೊಂದಿಗೆ 11,127.70 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಇಂದಿನ ಆರಂಭಿಕ ವಹಿವಾಟಿನಲ್ಲಿ ಮುಂಬಯಿ ಶೇರು ಪೇಟೆಯಲ್ಲಿ 316 ಶೇರುಗಳು ಮುನ್ನಡೆ ಸಾಧಿಸಿದರೆ 713 ಶೇರುಗಳು ಹಿನ್ನಡೆಗೆ ಗುರಿಯಾದವು. 35 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.
ಡಾಲರ್ ಎದುರು ರೂಪಾಯಿ ಇಂದಿನ ಆರಂಭಿಕ ವಹಿವಾಟಿನಲ್ಲಿ 1 ಪೈಸೆಯ ಏರಿಕೆ ದಾಖಲಿಸಿ 70.51 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ಸನ್ ಫಾರ್ಮಾ, ವೇದಾಂತ, ರಿಯಲನ್ಸ್,ಇಂಡಸ್ ಇಂಡ್ ಬ್ಯಾಂಕ್, ಐಟಿಸಿ, ಅದಾನಿ ಪೋರ್ಟ್ ಮತ್ತು ಈಶರ್ ಮàಟರ್ ಟಾಪ್ ಗೇನರ್ ಆಗಿದ್ದರೆ ಟಾಟಾ ಸ್ಟೀಲ್, ಇನ್‌ಫೋಸಿಸ್, ಒಎನ್‌ಜಿಸಿ, ಏಶ್ಯನ್ ಪೇಂಟ್ ಮತ್ತು ಲಾರ್ಸನ್ ಶೇರುಗಳು ಟಾಪ್ ಲೂಸರ್ ಎನಿಸಿಕೊಂಡವು.