ಮುಂಬಯಿ: ರಷ್ಯಾ ಮತ್ತು ಉಕ್ರೇನ್ ನಡುವಿನ ಬಿಕ್ಕಟ್ಟಿನ ಪರಿಣಾಮ ಮಂಗಳವಾರ (ಫೆ.22) ಮುಂಬಯಿ ಷೇರುಪೇಟೆಯ ಸೆನ್ಸೆಕ್ಸ್ ಆರಂಭಿಕ ವಹಿವಾಟಿನಲ್ಲಿ 1,000ಕ್ಕೂ ಅಧಿಕ ಅಂಕಗಳಷ್ಟು ಇಳಿಕೆ ಕಂಡಿತ್ತು. ಮಧ್ಯಾಹ್ನದ ವಹಿವಾಟಿನಲ್ಲಿ ಮುಂಬಯಿ ಷೇರುಪೇಟೆ, ಸೆನ್ಸೆಕ್ಸ್, ನಿಫ್ಟಿ ಜಿಗಿತ ಕಂಡಿದೆ.
ಇದನ್ನೂ ಓದಿ:ಹಿಜಾಬ್ ಕಡ್ಡಾಯ ಮಾಡಲಾಗದು, ಸಂಬಂಧಿಸಿದ ಮಹಿಳೆಯರ ಆಯ್ಕೆಗೆ ಬಿಡಬೇಕು: ನಾವದಗಿ ವಾದ
ಮುಂಬಯಿ ಷೇರರುಪೇಟೆ ಸೆನ್ಸೆಕ್ಸ್ 382.91 ಅಂಕಗಳಷ್ಟು ಇಳಿಕೆಯೊಂದಿಗೆ 57,300.20 ಅಂಗಳಲ್ಲಿ ದಿನಾಂತ್ಯದ ವಹಿವಾಟು ಮುಕ್ತಾಯಗೊಳಿಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 114.50 ಅಂಕಗಳಷ್ಟು ಕುಸಿತದೊಂದಿಗೆ 17,092.20 ಅಂಕಗಳಲ್ಲಿ ವಹಿವಾಟು ಕೊನೆಗೊಂಡಿದೆ.
ಟಾಟಾ ಸ್ಟೀಲ್, ಟಿಸಿಎಸ್, ಬಿಪಿಸಿಎಲ್, ಟಾಟಾ ಮೋಟಾರ್ಸ್ ಮತ್ತು ಎಸ್ ಬಿಐ ಲೈಫ್ ಇನ್ಸುರೆನ್ಸ್ ಷೇರುಗಳು ನಷ್ಟ ಕಂಡಿದೆ. ಮತ್ತೊಂದೆಡೆ ಮಹೀಂದ್ರ ಆ್ಯಂಡ್ ಮಹೀಂದ್ರ, ಬಜಾಜ್ ಫಿನ್ ಸರ್ವ್, ಈಚರ್ ಮೋಟಾರ್ಸ್, ಹಿಂಡಲ್ಕೋ ಇಂಡಸ್ಟ್ರೀಸ್ ಮತ್ತು ಒಎನ್ ಜಿಸಿ ಷೇರುಗಳು ಲಾಭಗಳಿಸಿದೆ.
ಇಂದು ಬೆಳಗ್ಗೆ ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ 1,004 ಅಂಕಗಳಷ್ಟು ಭಾರೀ ಇಳಿಕೆಯಾಗಿದ್ದು, 56,680 ಅಂಕಗಳಲ್ಲಿ ವಹಿವಾಟು ಮುಂದುವರಿದಿತ್ತು. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 285 ಅಂಕಗಳಷ್ಟು ಕುಸಿತವಾಗಿದ್ದು, 16,922ಅಂಕಗಳಿಗೆ ಇಳಿಕೆಯಾಗಿತ್ತು.